
ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲ ಕೂಗಳತೆ ದೂರದಲ್ಲೇ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ನಡೆದಿದೆ…
ಮಾ.25ರ ರಾತ್ರಿ ಚಿರತೆ ಓಡಾಡುವ ದೃಶ್ಯ ಕಂಡುಬಂದಿದೆ… ಚಿರತೆ ಚಲನವಲನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಿಸಿಟಿವಿ ಪರಿಶೀಲನೆ ನಡೆಸಿದಾಗ ನಿರ್ಮಾಣ ಹಂತದ ಕಟ್ಟಡದ ಬಳಿ ಚಿರತೆ ಓಡಾಡುತ್ತಿರುವುದು ಕಂಡುಬಂದಿದೆ…

ಜನ ವಾಸ ಮಾಡುವ ಕಡೆ ಚಿರತೆ ಪ್ರತ್ಯಕ್ಷವಾಗಿರುವುದನ್ನು ಕಂಡ ಸಾರ್ವಜನಿಕರು ಭಯಭೀತರಾಗಿದ್ದಾರೆ… ಕೂಡಲೇ ಘಾಟಿ ಸುತ್ತಾಮುತ್ತ ಓಡಾಡುವ ಚಿರತೆಯನ್ನು ಪತ್ತೆ ಮಾಡಿ ಸೆರೆ ಹಿಡಿದು, ಜನ ನೆಮ್ಮದಿಯಿಂದ ಬದುಕಲು ಅನುವು ಮಾಡಿಕೊಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ…