ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿರುವ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದ ಬ್ರಹ್ಮರಥೋತ್ಸವ ಕಾರ್ಯಕ್ರಮಗಳು ಡಿಸೆಂಬರ್ 24 ರಿಂದ 28 ರವರೆಗೆ ಹಾಗೂ ಸುಬ್ರಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವವು ಡಿಸೆಂಬರ್ 28 ರಂದು ನಡೆಯಲಿದ್ದು ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ಹೇಳಿದರು.
ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ “ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದ 2022-23ನೇ ಸಾಲಿನ ಬ್ರಹ್ಮರಥೋತ್ಸವ ಪ್ರಯುಕ್ತ ಪೂರ್ವಸಿದ್ಧತೆ ಸಭೆ”ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಾನುವಾರುಗಳಲ್ಲಿ ಚರ್ಮಗಂಟು ರೋಗ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೋಗ ಹರಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಜಾನುವಾರುಗಳ ಸಂತೆ, ಜಾತ್ರೆ ಸಾಗಾಣಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಡಿಸೆಂಬರ್ 20 ರಿಂದ ಆರಂಭಗೊಳ್ಳಬೇಕಿದ್ದ ಶ್ರೀ ಘಾಟಿ ಸುಬ್ರಹ್ಮಣ್ಯಸ್ವಾಮಿ ದನಗಳ ಜಾತ್ರೆಯನ್ನು ಮುಂದೂಡಲಾಗಿದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.
ಘಾಟಿ ದೇವಾಲಯದ ಸುತ್ತಮುತ್ತಲಿನ ಪ್ರದೇಶದಲ್ಲಿ ನೈರ್ಮಲ್ಯ ಕಾಪಾಡಬೇಕು. ಸಾರ್ವಜನಿಕರು ಸ್ವ-ಹಿತದೃಷ್ಟಿಯಿಂದ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು. ದೇವಾಲಯದ ಆವರಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಆರೋಗ್ಯ ಶಿಬಿರ ಹಾಗೂ ಪ್ರಥಮ ಚಿಕಿತ್ಸಾ ಕ್ರಮಗಳ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.
ನೆರೆ ರಾಜ್ಯಗಳು ಹಾಗೂ ವಿವಿಧ ಜಿಲ್ಲೆಗಳಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವುದರಿಂದ ದರ್ಶನ ವ್ಯವಸ್ಥೆ, ಪ್ರಸಾದ, ಕುಡಿಯುವ ನೀರು, ಶೌಚಾಲಯ, ಪಾರ್ಕಿಂಗ್ ವ್ಯವಸ್ಥೆ, ಸಾರಿಗೆ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಮಾಡುವಂತೆ ಹಾಗೂ ಸುಗಮ ಸಂಗೀತ ಇನ್ನಿತರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಸಂಚಾರ ದಟ್ಟಣೆ ಉಂಟಾಗದಂತೆ ತಡೆಯಲು ಹಾಗೂ ಅಗತ್ಯ ಪೊಲೀಸ್ ಬಂದೋಬಸ್ತ್ ಮಾಡುವಂತೆ ಪೋಲಿಸ್ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.
ಸರ್ಕಾರಿ ಯೋಜನೆಗಳ ಮಾಹಿತಿಯುಳ್ಳ ವಿವಿಧ ಇಲಾಖೆಗಳ ವಸ್ತುಪ್ರದರ್ಶನ ಹಾಗೂ ಸ್ವ-ಸಹಾಯ ಗುಂಪುಗಳು ಉತ್ಪಾದಿಸಿದ ಉತ್ಪನ್ನಗಳ ಮಾರಾಟ ಮಳಿಗೆ ತೆರೆಯುವಂತೆ ತಿಳಿಸಿದರು ಹಾಗೂ ಯಾವುದೇ ಲೋಪವಾಗದಂತೆ ಬ್ರಹ್ಮರಥೋತ್ಸವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಎಲ್ಲಾ ಇಲಾಖೆ ಅಧಿಕಾರಿಗಳು ಸಹಕಾರ ನೀಡಬೇಕು ಎಂದು ನಿರ್ದೇಶಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ವಿಜಯ.ಈ.ರವಿಕುಮಾರ್, ಮುಜರಾಯಿ ಇಲಾಖೆಯ ಸಹಾಯಕ ಆಯುಕ್ತರು ಹಾಗೂ ಘಾಟಿ ದೇವಾಲಯದ ಕಾರ್ಯ ನಿರ್ವಹಣಾ ಅಧಿಕಾರಿ ಹೇಮಾವತಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…