ಚಂದ್ರಯಾನ-3 ಪೂರ್ಣ ಯಶಸ್ಸಿನ ಪ್ರತೀಕ್ಷೆ: ರಾಘವೇಶ್ವರ ಸ್ವಾಮೀಜಿ

ಬಹುನಿರೀಕ್ಷಿತ ಚಂದ್ರಯಾನ-3 ಗಗನನೌಕೆ ಯಶಸ್ವಿಯಾಗಿ ನಭಕ್ಕೆ ಚಿಮ್ಮಿದೆ. ಆಕಾಶದೆತ್ತರಕ್ಕೆ ಚಿಮ್ಮಿರುವುದು ಚಂದ್ರಯಾನ ನೌಕೆ ಮಾತ್ರವಲ್ಲ; ನಮ್ಮ ಹೃದಯ. ನಮ್ಮ ಹೃದಯ ಮಾತ್ರವಲ್ಲ, ಶತಕೋಟಿ ಭಾರತೀಯರ ಹೃದಯ ಇಂದು ಆಗಸಕ್ಕೆ ಯಶಸ್ವಿಯಾಗಿ ಹಾರಿದೆ ಎಂದು ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರ ಭಾರತೀಮಹಾಸ್ವಾಮೀಜಿ ಬಣ್ಣಿಸಿದ್ದಾರೆ.

ಭಾರತದ ಇತಿಹಾಸದಲ್ಲಿ ಇದು ಅಪರೂಪದಲ್ಲಿ ಅಪರೂಪದ ದಿನ. ಉಡಾವಣೆ ಯಶಸ್ವಿಯಾದದ್ದು ಎಲ್ಲಿಲ್ಲದ ಸಂಭ್ರಮ ತಂದಿದೆ. ನಮಗೇ ಇಷ್ಟು ಖುಷಿಯಾಗಿರಬೇಕಾದರೆ ಆ ವಿಜ್ಞಾನಿಗಳಿಗೆ ಅದೆಷ್ಟು ಸಂಸತಸವಾಗಿರಬೇಡ ಎಂದು ಸ್ವಾಮೀಜಿ ಉದ್ಗರಿಸಿದ್ದಾರೆ.

“ಹಿಂದಿನ ಕಾಲದಲ್ಲಿ ಋಷಿಮುನಿಗಳು ತಪಸ್ಸು ಮಾಡುತ್ತಿದ್ದುದನ್ನು ನಾವು ಕೇಳಿದ್ದೇವೆ. ಇಸ್ರೋದಲ್ಲಿ ವಿಜ್ಞಾನಿಗಳು ಮಾಡುತ್ತಿರುವುದು ತಪಸ್ಸಿಗೆ ಕಡಿಮೆಯೇನೂ ಅಲ್ಲ. ಅವರ ಅಗಾಧವಾದ ಪರಿಶ್ರಮ ಫಲಕೊಟ್ಟು ಆಕಾಶನೌಕೆ ಯಶಸ್ವಿಯಾಗಿ ಉಡಾವಣೆಯಾಗಿರುವುದು ಶತಕೋಟಿ ಭಾರತೀಯರು ಹೆಮ್ಮೆಪಡುವಂಥ ವಿಚಾರ” ಎಂದು ಸಂದೇಶದಲ್ಲಿ ವಿವರಿಸಿದ್ದಾರೆ.

ಆಕಾಶದಲ್ಲಿ ಭಾರತದ ಕೀರ್ತಿಪತಾಕೆ ಹಾರುತ್ತಿದೆ ಎಂಬ ಭಾವನೆ ಬರುತ್ತಿದೆ. ನಾವು, ಧರ್ಮಪುರುಷರೆಲ್ಲ ಸೇರಿ ಅನುಷ್ಠಾನ ಮಡೋಣ. ಶುಭ ಹಾರೈಕೆ ಮಾಡೋಣ. ಈ ನೌಕೆ ಯಶಸ್ವಿಯಾಗಿ ಚಂದ್ರನಲ್ಲಿ ಇಳಿಯಬೇಕು. ಈ ಯೋಜನೆ ಪರಿಪೂರ್ಣ ಯಶಸ್ಸು ಕಾಣಬೇಕು.

ತನ್ಮೂಲಕ ದೇಶಕ್ಕೆ, ವಿಶ್ವಕ್ಕೆ ಶ್ರೇಯಸ್ಸು ಆಗಬೇಕು. ಆ ಆಕಾಶನೌಕೆ ಚಂದ್ರನಲ್ಲಿ ಇಳಿದು ಭಾರತದ ಕೀರ್ತಿಪತಾಕೆ ಚಂದ್ರನಲ್ಲಿ ಸ್ಥಾಪಿಸುವಂತೆ ಆಗುವ ಸುದಿನಕ್ಕಾಗಿ ಪ್ರತೀಕ್ಷೆ ಮಾಡೋಣ. ನಾವೆಲ್ಲ ಸೇರಿ ಇದಕ್ಕಾಗಿ ಪ್ರಾರ್ಥನೆ ಮಾಡೋಣ, ತಪಸ್ಸು ಮಾಡೋಣ ಎಂದು ಕೋರಿದ್ದಾರೆ.

Ramesh Babu

Journalist

Recent Posts

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

47 minutes ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

1 hour ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

3 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

12 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

14 hours ago

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್: ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸಲು ಸಭೆ

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…

1 day ago