ಚಂದ್ರಯಾನ-3 ವಿಕ್ರಮ್ ಲ್ಯಾಂಡರ್ ಮಾಡ್ಯೂಲ್ ಚಂದ್ರನ ಮೇಲೆ ಬುಧವಾರ ಸಂಜೆ 06.03ಕ್ಕೆ ಯಶಸ್ವಿಯಾಗಿ ಲ್ಯಾಂಡಿಂಗ್ ಆಗಿದೆ. ಇಸ್ರೋ ಸಾಧನೆಗೆ ಹೊಸದೊಂದು ಬಲ ದೊರಕಿದೆ. ಭಾರತದ ವೈಜ್ಞಾನಿಕ ಶಕ್ತಿಯ ಅನಾವರಣವಾಗಿ ಜಗತ್ತಿಗೆ ಮತ್ತೊಮ್ಮೆ ಬೆಳಕು ಚಲ್ಲಿದೆ.
ನಾಲ್ಕು ವರ್ಷಗಳಲ್ಲಿ ಇಸ್ರೋದ 2ನೇ ಪ್ರಯತ್ನದಲ್ಲಿ ಚಂದ್ರಯಾನ-3 ಮಿಷನ್ ಚಂದ್ರನ ಮೇಲೆ ಸ್ಪರ್ಶಿಸುವಲ್ಲಿ ಮತ್ತು ರೋಬೋಟಿಕ್ ಲೂನಾರ್ ರೋವರ್ ನ್ನು ಲ್ಯಾಂಡಿಂಗ್ ಮಾಡುವಲ್ಲಿ ಯಶಸ್ವಿಯಾಗಿದೆ.
ಯುಎಸ್ ನಂತರ ಚಂದ್ರನ ಮೇಲ್ಮೈಯಲ್ಲಿ ಸಾಫ್ಟ್ ಲ್ಯಾಂಡಿಂಗ್ ತಂತ್ರಜ್ಞಾನ ಯಶಸ್ಸು ಪಡೆದುಕೊಂಡ ನಾಲ್ಕನೇ ದೇಶ ಭಾರತವಾಗಿದೆ. ಚೀನಾ ಮತ್ತು ಹಿಂದಿನ ಸೋವಿಯತ್ ಒಕ್ಕೂಟ ಯಶಸ್ವಿಯಾಗಿದ್ದವು.
ಚಂದ್ರನ ದಕ್ಷಿಣ ಧ್ರುವದಲ್ಲಿ ಪ್ರಪ್ರಥಮವಾಗಿ ಉಪಗ್ರಹ ಇಳಿಸುವ ಮೂಲಕ ವಿಶ್ವದ ಗಮನ ಸೆಳೆದ ಇಸ್ರೋಗೆ ರಾಷ್ಟ್ರಪತಿ ದ್ರೌಪದಿ ಮುಮು೯, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವಾರು ಗಣ್ಯರು, ದೇಶದ ಜನರು ಅಭಿನಂದನೆಗಳನ್ನು ಸಲ್ಲಿಸಿದರು.
ಮುಂದಿನ ದಿನಗಳಲ್ಲಿ ಇಸ್ರೋ ಮತ್ತಷ್ಟು ಅಂತರಿಕ್ಷ ಯಾನ ಕೈಗೊಳ್ಳಲಿ ಎಂದು ಆಶಿಸಿದರು.