ಚಂದ್ರಯಾನ-3 ಲ್ಯಾಂಡರ್ ಮಾಡ್ಯೂಲ್ ಚಂದ್ರನ ಮೇಲೆ ಬುಧವಾರ ಸಂಜೆ 06.03ಕ್ಕೆ ಯಶಸ್ವಿಯಾಗಿ ಇಳಿದಿದ್ದು , ಇಸ್ರೋ ಛಲಕ್ಕೆ ಹೊಸದೊಂದು ಬಲ ದೊರಕಿದ್ದು ಭಾರತದ ವೈಜ್ಞಾನಿಕ ಶಕ್ತಿಯ ಅನಾವರಣವಾಗಿ ಜಗತ್ತಿಗೆ ಮತ್ತೊಮ್ಮೆ ಬೆಳಕು ಚಲ್ಲಿದೆ ಎಂದು ತೂಬಗೆರೆ ಗ್ರಾಮ ಪಂಚಾಯಿತಿ ಸದಸ್ಯ ರವಿಸಿದ್ದಪ್ಪ ತಿಳಿಸಿದರು.
ಜಗತ್ತಿನಲ್ಲಿಯೇ ಪ್ರಥಮವಾಗಿ ರೋವರ್ (ವಿಕ್ರಮ ಲ್ಯಾಂಡರ್)ಅನ್ನು ಚಂದ್ರನ ದಕ್ಷಿಣ ಧ್ರುವದ ಮೇಲೆ ಯಶಸ್ವಿಯಾಗಿ ಇಳಿಸುವ ಮೂಲಕ ಚಂದ್ರಯಾನ-3 ಮಹಾನ್ ಸಾಹಸವನ್ನು ಇಸ್ರೋ ಪೂರೈಸಿರುವುದು ಅಭಿನಂದನಾರ್ಹ ಎಂದರು.
ಆ ಮೂಲಕ ಖಗೋಳ ಸಂಶೋಧನೆಗೆ ನಿರ್ಣಾಯಕ ತಿರುವು ಕೊಟ್ಟಿದೆ. ಇಸ್ರೋ ವಿಜ್ಞಾನಿಗಳ ಈ ಸಾಧನೆಯನ್ನು ಕೇವಲ ಪದಗಳಿಂದ ಬಣ್ಣಿಸಿದರೆ ಸಾಲದು. ಹಗಲಿರುಳು ಶ್ರಮಿಸಿದ ಅವರ ಯಶಸ್ಸನ್ನು, ಅರ್ಪಣಾ ಮನೋಭಾವವನ್ನು ಹೃದಯಪೂರ್ವಕವಾಗಿ ಕೊಂಡಾಡಿ ಗೌರವಿಸೋಣ ಎಂದು ಹೇಳಿದರು.
ಚಂದ್ರಯಾನ-3 ಮಾಡ್ಯೂಲ್ ಚಂದ್ರನ ಮೇಲೆ ಯಶಸ್ವಿ ಸ್ಪರ್ಶ ಹಿನ್ನೆಲೆ ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದ ತೂಬಗೆರೆ ಜನತೆ