ಮುಖ್ಯಮಂತ್ರಿ ಸಿದ್ದರಾಮಯ್ಯ ಪೀಣ್ಯದಲ್ಲಿರುವ ಇಸ್ರೋ ಕೇಂದ್ರಕ್ಕೆ ಭೇಟಿ ನೀಡಿ ಚಂದ್ರಯಾನ-3 ಯಶಸ್ಸಿಗೆ ಕಾರಣರಾದ ಇಸ್ರೋ ಅಧ್ಯಕ್ಷರಾದ ಸೋಮನಾಥ್ ಸೇರಿದಂತೆ ವಿಜ್ಞಾನಿಗಳು, ಸಿಬ್ಬಂದಿ ವರ್ಗದವರನ್ನು ಅಭಿನಂದಿಸಿದರು.
ಈ ವೇಳೆ ಇವರು ಮಾತನಾಡಿ, ಚಂದ್ರಯಾನ-3 ಯಶಸ್ಸಿಗೆ ಕಾರಣರಾದ ಇಸ್ರೋ ಅಧ್ಯಕ್ಷರಾದ ಸೋಮನಾಥ್ ಸೇರಿದಂತೆ ವಿಜ್ಞಾನಿಗಳು, ಸಿಬ್ಬಂದಿ ವರ್ಗದವರನ್ನು ಸರ್ಕಾರದ ವತಿಯಿಂದ ಸನ್ಮಾನಿಸಲಾಗುವುದು ಎಂದರು.
ಚಂದ್ರಯಾನ-3 ಮಿಷನ್ ಯಶಸ್ವಿ ನಮಗೆಲ್ಲ ಹೆಮ್ಮೆ ತರುವಂತಹ ವಿಚಾರ. ನಾನು ಕೂಡ ನಿನ್ನೆ ವಿಕ್ರಂ ರೋವರ್ ಲ್ಯಾಂಡಿಂಗ್ ವೀಕ್ಷಣೆ ಮಾಡಿದ್ದೇನೆ. ಖುಷಿ ಆಯ್ತು, ಬಹಳ ಹೆಮ್ಮೆ ಅನ್ನಿಸುತ್ತಿದೆ, ಇದೊಂದು ದೊಡ್ಡ ಸಾಧನೆ. ಸಾಧನೆ ಮಾಡಲು ಹಲವು ವರ್ಷಗಳಿಂದ ವಿಜ್ಞಾನಿಗಳು ಶ್ರಮ ಪಡುತ್ತಿದ್ದಾರೆ. ಅಂದಾಜು 500 ವಿಜ್ಞಾನಿಗಳ ಪರಿಶ್ರಮದ ಫಲದಿಂದ ಐತಿಹಾಸಿಕ ಸಾಧನೆ ಮಾಡಲಾಗಿದೆ. ಈ ಸಾಧನೆಯಿಂದ ಇಡೀ ಜಗತ್ತು ಭಾರತದ ಕಡೆ ನೋಡುತ್ತಿದೆ. ನಾವೆಲ್ಲರೂ ಇಸ್ರೋದ ಈ ಸಾಧನೆಯಿಂದ ಖುಷಿ ಪಡಬೇಕಿದೆ ಎಂದರು.