ಚಂದ್ರಯಾನ-3 ಮಿಷನ್ ಯಶಸ್ಸು: ಇಸ್ರೋ ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ: ವಿಜ್ಞಾನಿಗಳಿಗೆ ಅಭಿನಂದನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಪೀಣ್ಯದಲ್ಲಿರುವ ಇಸ್ರೋ ಕೇಂದ್ರಕ್ಕೆ ಭೇಟಿ ನೀಡಿ ಚಂದ್ರಯಾನ-3 ಯಶಸ್ಸಿಗೆ ಕಾರಣರಾದ ಇಸ್ರೋ ಅಧ್ಯಕ್ಷರಾದ ಸೋಮನಾಥ್ ಸೇರಿದಂತೆ ವಿಜ್ಞಾನಿಗಳು, ಸಿಬ್ಬಂದಿ ವರ್ಗದವರನ್ನು ಅಭಿನಂದಿಸಿದರು.

ಈ ವೇಳೆ ಇವರು ಮಾತನಾಡಿ, ಚಂದ್ರಯಾನ-3 ಯಶಸ್ಸಿಗೆ ಕಾರಣರಾದ ಇಸ್ರೋ ಅಧ್ಯಕ್ಷರಾದ ಸೋಮನಾಥ್ ಸೇರಿದಂತೆ ವಿಜ್ಞಾನಿಗಳು, ಸಿಬ್ಬಂದಿ ವರ್ಗದವರನ್ನು ಸರ್ಕಾರದ ವತಿಯಿಂದ ಸನ್ಮಾನಿಸಲಾಗುವುದು ಎಂದರು.

ಚಂದ್ರಯಾನ‌-3 ಮಿಷನ್ ಯಶಸ್ವಿ ನಮಗೆಲ್ಲ ಹೆಮ್ಮೆ ತರುವಂತಹ ವಿಚಾರ. ನಾನು ಕೂಡ ನಿನ್ನೆ ವಿಕ್ರಂ ರೋವರ್ ಲ್ಯಾಂಡಿಂಗ್ ವೀಕ್ಷಣೆ ಮಾಡಿದ್ದೇನೆ. ಖುಷಿ ಆಯ್ತು, ಬಹಳ ಹೆಮ್ಮೆ ಅನ್ನಿಸುತ್ತಿದೆ, ಇದೊಂದು ದೊಡ್ಡ ಸಾಧನೆ. ಸಾಧನೆ ಮಾಡಲು ಹಲವು ವರ್ಷಗಳಿಂದ ವಿಜ್ಞಾನಿಗಳು ಶ್ರಮ ಪಡುತ್ತಿದ್ದಾರೆ. ಅಂದಾಜು 500 ವಿಜ್ಞಾನಿಗಳ ಪರಿಶ್ರಮದ ಫಲದಿಂದ ಐತಿಹಾಸಿಕ ಸಾಧನೆ ಮಾಡಲಾಗಿದೆ. ಈ ಸಾಧನೆಯಿಂದ ಇಡೀ ಜಗತ್ತು ಭಾರತದ ಕಡೆ ನೋಡುತ್ತಿದೆ. ನಾವೆಲ್ಲರೂ ಇಸ್ರೋದ ಈ ಸಾಧನೆಯಿಂದ ಖುಷಿ ಪಡಬೇಕಿದೆ ಎಂದರು.

Ramesh Babu

Journalist

Recent Posts

ಹೈನುಗಾರಿಕೆಗೆ ಅಜೋಲಾ ಆಸರೆ: ಹಸಿರು ಮೇವಿನ ಕೊರತೆಗೆ ಪರ್ಯಾಯ: ಹಾಲು ನೀಡುವ ರಾಸುಗಳಿಗೆ ಪೌಷ್ಟಿಕ ಪೂರಕ ಆಹಾರ

ಬೆಂಗಳೂರು ಗ್ರಾಮಾಂತರ: ಮಳೆಯ ಕೊರತೆ ಹಾಗೂ ಹಸಿರು ಮೇವಿನ ಅಭಾವದಿಂದ ಜಾನುವಾರು ಸಾಕಾಣಿಕೆದಾರರು ಎದುರಿಸುತ್ತಿರುವ ಸಂಕಷ್ಟಕ್ಕೆ ಪರ್ಯಾಯವಾಗಿ, ಜಾನುವಾರುಗಳಿಗೆ ಸ್ಥಳೀಯವಾಗಿಯೇ…

6 hours ago

ಸೆ. 28ಕ್ಕೆ ಅವತಿ ಬೆಟ್ಟದಲ್ಲಿ “ವಿಶ್ವ ಪ್ರವಾಸೋದ್ಯಮ ದಿನಾಚರಣೆ-2026″

ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ದೇವನಹಳ್ಳಿ ತಾಲ್ಲೂಕಿನ ಅವತಿಯ ತಿಮ್ಮರಾಯಸ್ವಾಮಿ ಬೆಟ್ಟದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ…

17 hours ago

ಮಾದಕ ವಸ್ತುಗಳ (ಡ್ರಗ್ಸ್) ಸಂಪೂರ್ಣ ನಿಯಂತ್ರಣಕ್ಕೆ ಎಲ್ಲಾ ಇಲಾಖೆಗಳು ಒಟ್ಟಾಗಿ ಕರ್ತವ್ಯ ನಿರ್ವಹಿಸಿ – ಜಿಲ್ಲಾಧಿಕಾರಿ ಡಾ.ಕೆ.ಎನ್.ಅನುರಾಧ

ಜಿಲ್ಲೆಯಲ್ಲಿ ಮಾದಕ ವಸ್ತುಗಳ (ಡ್ರಗ್ಸ್) ಹಾವಳಿಯನ್ನು ಸಂಪೂರ್ಣವಾಗಿ ತೊಡೆದುಹಾಕಲು ಎಲ್ಲಾ ಇಲಾಖೆಗಳು ಒಟ್ಟಾಗಿ ಕೈಜೋಡಿಸಿ ಕರ್ತವ್ಯ ನಿರ್ವಹಿಸಿ ಎಂದು ಜಿಲ್ಲಾಧಿಕಾರಿ…

18 hours ago

ನಿಷೇಧಿತ ಕ್ಯಾಟ್ ಫಿಶ್ ಸಾಕಾಣಿಕೆ ಸ್ಥಳಗಳಿಗೆ ಸಿಇಒ ದಿಢೀರ್ ಭೇಟಿ: ಸ್ಥಳದಲ್ಲೇ ಕ್ಯಾಟ್ ಫಿಶ್, ಹೊಂಡಗಳ ನಾಶ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆ ಹೋಬಳಿಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಿಷೇಧಿತ ಕ್ಯಾಟ್‌ ಫಿಶ್‌ ಸಾಕಣೆ ಮಾಡುತ್ತಿದ್ದ ಹೊಂಡಗಳ…

19 hours ago

ಗೋಮಾಳ ಭೂಮಿಯಲ್ಲಿನ ರೈತರನ್ನು ಒಕ್ಕಲೆಬ್ಬಿಸದಂತೆ ಜಿಲ್ಲಾಧಿಕಾರಿಗೆ ಮನವಿ

ಕೋಲಾರ: ಮೈಸೂರು ಮಹಾರಾಜರ ಕಾಲದಿಂದಲೂ ಸಕ್ಷಮ ಪ್ರಾಧಿಕಾರದಿಂದ ಕಾನೂನುಬದ್ಧವಾಗಿ ರೈತರಿಗೆ ಹಂಚಿಕೆಯಾಗಿರುವ ಸರ್ಕಾರಿ ಗೋಮಾಳ ಹಾಗೂ ಕಂದಾಯ ಭೂಮಿಯಲ್ಲಿನ ರೈತರನ್ನು…

22 hours ago

ವೈಯಕ್ತಿಕ ವಿಚಾರಕ್ಕೆ ಸಿಎಂ ಭೇಟಿ; ತಾಲೂಕಿನ ಹಿತರಕ್ಷಣೆಗಲ್ಲ? ವೆಂಕಟರಮಣಯ್ಯ ವಿರುದ್ಧ ಕಾಡನೂರು ಗ್ರಾ.ಪಂ ಮಾಜಿ ಅಧ್ಯಕ್ಷ ಮನು ಎನ್ ಆರ್ ಆರೋಪ

ದೊಡ್ಡಬಳ್ಳಾಪುರ: ಅಳಿಯನ ವರ್ಗಾವಣೆ ಸೇರಿದಂತೆ ವೈಯಕ್ತಿಕ ವಿಚಾರಗಳಿಗಾಗಿ ಮಾಜಿ ಶಾಸಕ ಟಿ. ವೆಂಕಟರಮಣಯ್ಯ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು…

24 hours ago