ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ವಿಧಾನಸೌಧದಲ್ಲಿ ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರೆ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆ ವಿಷಯ ಕುರಿತಂತೆ ನಡೆಸಿದ ಸಭೆಯ ಮುಖ್ಯಾಂಶಗಳು:
• ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವುದಕ್ಕೆ ಸಂಬಂಧಿಸಿದಂತೆ ಕೆಲವು ಕಾನೂನು ತೊಡಕುಗಳಿದ್ದು, ಅದನ್ನು ಸರಿಪಡಿಸಿಕೊಳ್ಳುವ ಸಲಹೆಯನ್ನು ಕಾನೂನು ತಜ್ಞರು ನೀಡಿದ್ದಾರೆ.
• ಈಗಾಗಲೇ ಎಪ್ರಿಲ್ ತಿಂಗಳಲ್ಲಿ ಅಂತಿಮ ನೋಟಿಫಿಕೇಶನ್ ಅಗಿರುವ ಕಾರಣ ಅದರ ಸಾಧಕ ಬಾಧಕಗಳ ಕುರಿತು ಚರ್ಚೆ ನಡೆಸುವ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ 10 ದಿನಗಳ ಕಾಲಾವಕಾಶ ಅಗತ್ಯವಿದೆ. ಈ ಕಾಲಾವಧಿಯಲ್ಲಿ ಸರ್ಕಾರಕ್ಕೆ ಒಂದು ಸ್ಪಷ್ಟ ನಿರ್ಧಾರಕ್ಕೆ ಬರಲು ಸಾಧ್ಯವಿದೆ.
• ಕಾನೂನು – ಕಾಯ್ದೆಗೆ ವಿರುದ್ಧವಾಗಿ ಸರ್ಕಾರ ಯಾವುದೇ ಕ್ರಮಗಳನ್ನು ಕೈಗೊಳ್ಳಲು ಸಾಧ್ಯವಿಲ್ಲ. ನಿಯಮಾನುಸಾರ ಅಂತಿಮ ನೋಟಿಫಿಕೇಶ್ ಆಗಿರುವ ಕಾರಣ, ಅದರ ಕಾನೂನು ಅಂಶಗಳನ್ನು ಪರಿಶೀಲಿಸುವ ಅಗತ್ಯವಿದೆ. ಈ ಕುರಿತು ನಿನ್ನೆ ಪೂರ್ವಭಾವಿ ಸಭೆ ನಡೆಸಿದ್ದೇವೆ.
• ಇಂದೇ ಸರ್ಕಾರದ ನಿಲುವು ಪ್ರಕಟಿಸಲು ಸಾಧ್ಯವಿಲ್ಲ. 10 ದಿನಗಳ ಬಳಿಕ ಮತ್ತೆ ಸಭೆ ನಡೆಸಿ ಸರ್ಕಾರದ ನಿಲುವು ಸ್ಪಷ್ಟಪಡಿಸಲಾಗುವುದು.
• ನಾವು ಪ್ರಜಾಪ್ರಭುತ್ವ ಮತ್ತು ಸಂವಾದದಲ್ಲಿ ನಂಬಿಕೆಯಿಟ್ಟಿರುವವರು. ಪ್ರತಿಭಟನೆಗೆ ಯಾವುದೇ ಅಡ್ಡಿಪಡಿಸಿಲ್ಲ. ನಾನೂ ರೈತ ಸಂಘದಲ್ಲಿದ್ದವನು, ನಮ್ಮ ವಿರುದ್ಧ ಪ್ರತಿಭಟಿಸಿದರೂ ಅದನ್ನು ಹತ್ತಿಕ್ಕುವ ಕೆಲಸ ನಾವು ಮಾಡಿಲ್ಲ.
ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…
ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…
ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…
ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…
ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…