ದೇವನಹಳ್ಳಿ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಅವರನ್ನು ಭೇಟಿ ಮಾಡಲು ತೆರಳುತ್ತಿದ್ದ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ಭೂ ಸ್ವಾಧೀನ ವಿರೋಧಿ ಹೋರಾಟಗಾರರನ್ನು ಗುರುವಾರ ತಾಲ್ಲೂಕಿನಾದ್ಯಂತ ಪೊಲೀಸರು ತಡೆದಿದ್ದಾರೆ. ಈ ವೇಳೆ ರೈತ ಹೋರಾಟಗಾರರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.
‘ಕೆಲವು ರೈತ ಮುಖಂಡರನ್ನು ಗೃಹಬಂಧನದಲ್ಲಿ ಇರಿಸಿ ಪೊಲೀಸರು ಸರ್ವಾಧಿಕಾರಿಗಳಾಗಿ ವರ್ತಿಸುತ್ತಿದ್ದಾರೆ’. ಎಂದು ರೈತ ಹೋರಾಟಗಾರರು ಆರೋಪಿಸಿದ್ದಾರೆ.
ಈ ವೇಳೆ ರೈತರು ಬಾತ್ ನಲ್ಲಿ ವಿಷ ಬೆರಸಿ ಸೇವಿಸಲು ಮುಂದಾದರು. ಈ ವೇಳೆ ಪೊಲೀಸರು ರೈತರಿಂದ ವಿಷದ ಅನ್ನದ ಪಾತ್ರೆ ಕಿತ್ತು ಕೆಳಗೆ ಚೆಲ್ಲಿದರು. ಈ ವೇಳೆ ರೈತರು ಮತ್ತು ಪೊಲೀಸರ ನಡುವೆ ತಳ್ಳಾಟ ಉಂಟಾಯಿತು. ನಂತರ ರೈತರ ಹೋರಾಟ ವಿಕೋಪಕ್ಕೆ ತಿರುಗಿದೆ. ರೈತ ವೆಂಕಟೇಶ್ ಅನ್ನದ ಜೊತೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಸದ್ಯ ಅಸ್ವಸ್ಥಗೊಂಡಿದ್ದಾರೆ.