ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ನಿಯೋಗದವರ ಜೊತೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ನಡೆಸಿ, ಚರ್ಚಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಮಾತುಗಳು;
ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹೋಬಳಿಯಲ್ಲಿ ಕೆಐಎಡಿಬಿ ವತಿಯಿಂದ 13 ಹಳ್ಳಿಗಳ ವ್ಯಾಪ್ತಿಯಲ್ಲಿ 1,777 ಎಕರೆ ಜಮೀನು ಭೂಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಲಾಗಿದ್ದು, ಈಗಾಗಲೇ ಮೂರು ಬಾರಿ ಭೂಸ್ವಾಧೀನ ಪ್ರಕ್ರಿಯೆ ನಡೆಸಿರುವುದರಿಂದ ಹೊಸದಾಗಿ ಭೂಸ್ವಾಧೀನ ನಡೆಸಬಾರದು. ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕು ಎಂದು ರೈತರು ಮನವಿ ಮಾಡಿದ್ದಾರೆ ಎಂದರು.
430 ಎಕ್ರೆ ಜಮೀನು ಭೂಸ್ವಾಧೀನಕ್ಕೆ ಈಗಾಗಲೇ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಅಂತಿಮ ಅಧಿಸೂಚನೆ ಆಗಿರುವ ಜಮೀನು ವಾಪಾಸು ಪಡೆಯಲು ಸಾಧ್ಯವಿಲ್ಲ. ಸರ್ಕಾರ ರೈತರ ಪರವಾಗಿದ್ದು ಈ ವಿಷಯದ ಕುರಿತು ಜನಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ಅಡ್ವೊಕೇಟ್ ಜನರಲ್ ಅವರ ಅಭಿಪ್ರಾಯವನ್ನು ಸಹ ಪಡೆದುಕೊಂಡು ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಸಚಿವರಾದ ಎಂ.ಬಿ.ಪಾಟೀಲ್, ಕೆ.ಎಚ್.ಮುನಿಯಪ್ಪ, ಐದನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷರಾದ ಸಿ.ನಾರಾಯಣಸ್ವಾಮಿ, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಗೂ ರೈತ ಪ್ರತಿನಿಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆ ಇಂದು…
ನಮ್ಮ ನಿಷ್ಠೆ ಪ್ರಕೃತಿಗೆ....... ಹರಕೆ ಮತ್ತು ಶಾಪ, ಜೊತೆಗೆ ನಿನ್ನೆಯ ನಾಗರ ಪಂಚಮಿ...... ಎರಡೂ ನಮ್ಮ ನಡುವಿನ ಪ್ರಬಲ ನಂಬಿಕೆಗಳು.......…
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು, ಸಚಿವರು ಮತ್ತು ಶಾಸಕರುಗಳ ಜೊತೆ ನಡೆಸಿದ ಸಭೆಯಲ್ಲಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಗ್ರಾಮದ ಪುಷ್ಪಲತಾ ಸೋಮಶೇಖರ್ ರವರನ್ನು ರಾಜ್ಯ ಮಟ್ಟದ ಜಾಗೃತಿ ಸಮಿತಿ ಸದಸ್ಯರನ್ನಾಗಿ…
ಬೆಂಗಳೂರು ಕೊಡಿಗೆಹಳ್ಳಿ, : ಮೆಡಿಕವರ್ ಆಸ್ಪತ್ರೆಯು ಕೊಡಿಗೆಹಳ್ಳಿಯ ಸೃಷ್ಟಿ ಗ್ಲೋಬಲ್ ಶಾಲೆಯಲ್ಲಿ 9ನೇ ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು, ಶಾಲಾ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…