ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ಹೋರಾಟಕ್ಕೆ ಮಣಿದಿರುವ ರಾಜ್ಯ ಸರ್ಕಾರ ಕೊನೆಗೂ ಭೂ ಸ್ವಾಧೀನ ಪ್ರಕ್ರಿಯೆ ಕೈಬಿಡಲು ನಿರ್ಧರಿಸಿದೆ.
ಕೆಐಎಡಿಬಿಯಿಂದ 13 ಗ್ರಾಮಗಳಲ್ಲಿ 1,777 ಎಕರೆ ಭೂ ಸ್ವಾಧೀನ ವಿರೋಧಿಸಿ ರೈತರು ಸುಮಾರು 1,200ಕ್ಕೂ ಹೆಚ್ಚು ದಿನಗಳಿಂದ ಹೋರಾಟ ನಡೆಸುತ್ತಿದ್ದರು. ರೈತರ ಹೋರಾಟಕ್ಕೆ ಮಣಿದ ಸರ್ಕಾರ ಭೂ ಸ್ವಾಧೀನ ಪ್ರಕ್ರಿಯೆ ಕೈಬಿಡಲು ನಿರ್ಧರಿಸಿದೆ.
ವಿಧಾನಸೌಧದಲ್ಲಿ ಇಂದು(ಮಂಗಳವಾರ) ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರೈತರ ಜೊತೆಗಿನ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
1,777 ಎಕರೆ ಡಿನೋಟಿಫಿಕೇಷನ್ ಕೈಬಿಟ್ಟಿದ್ದೇವೆ. ಆದರೆ, ಭೂಮಾಲೀಕರು ಸ್ವಯಂ ಪ್ರೇರಿತರಾಗಿ ಭೂಮಿ ನೀಡಲು ಮುಂದಾದರೆ ಖರೀದಿಸುತ್ತೇವೆ. ಆದರೆ, ಬಲವಂತವಾಗಿ ಖರೀದಿಸುವುದಿಲ್ಲ ಸ್ವಯಂ ಪ್ರೇರಿತರಾಗಿ ಭೂಮಿ ನೀಡುವವರಿಗೆ ಸೂಕ್ತ ಪರಿಹಾರ ನೀಡುತ್ತೇವೆ. ರಾಜ್ಯಕ್ಕೆ ಕೈಗಾರಿಕೆಗಳು ಬರಬೇಕು ಎಂಬುದು ನಮ್ಮ ಆಶಯವಾಗಿದೆ. ಸರ್ಕಾರದ ನಿರ್ಧಾರ ದೇವನಹಳ್ಳಿ ಪ್ರದೇಶಕ್ಕೆ ಮಾತ್ರ ಸಿಮೀತವಾಗಿದೆ ಎಂದು ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಮಾತುಗಳು:
• ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಟ್ಟಿದ್ದೇವೆ.
• ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಡಲು ನಿರ್ಧರಿಸಿದ್ದರೂ ಕೆಲವು ರೈತರು ಜಮೀನು ನೀಡಲು ಸಿದ್ಧರಿರುವುದಾಗಿ ಮುಂದೆ ಬಂದಿದ್ದಾರೆ. ಜಮೀನು ನೀಡಲು ಇಚ್ಚಿಸುವವರ ಜಮೀನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲಿದ್ದು, ಅವರಿಗೆ ಹೆಚ್ಚಿನ ಪರಿಹಾರ ಮತ್ತು ಅಭಿವೃದ್ಧಿಪಡಿಸಿದ ಜಮೀನು ನೀಡಲಾಗುವುದು.
• ಅಂತಹ ರೈತರಿಗೆ ಮಾರ್ಗಸೂಚಿ ದರಕ್ಕಿಂತ ಹೆಚ್ಚುವರಿ ದರವನ್ನು ನೀಡಲಿದೆ. ಅಲ್ಲಿ ಕೃಷಿ ಚಟುವಟಿಕೆಗಳನ್ನು ಮುಂದುವರೆಸಲು ಬಯಸುವ ರೈತರು ಕೃಷಿ ಚಟುವಟಿಕೆಗಳನ್ನು ಮುಂದುವರೆಸಿಕೊಂಡು ಹೋಗಬಹುದಾಗಿದೆ.
• ದೇವನಹಳ್ಳಿ ತಾಲೂಕು ಬೆಂಗಳೂರಿಗೆ ಹತ್ತಿರದ್ದಲ್ಲಿದ್ದು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅಲ್ಲಿಯೇ ಇದೆ. ರಾಜ್ಯದ ಪ್ರತಿಯೊಬ್ಬರ ವರಮಾನ ಹೆಚ್ಚಳವಾಗಬೇಕಿದ್ದರೆ ಅಭಿವೃದ್ದಿ ಕಾರ್ಯ ನಡೆಯಬೇಕಾಗಿದೆ. ಹೊಸ ಕೈಗಾರಿಕೆಗಳ ಪ್ರಾರಂಭಕ್ಕೆ, ಬಂಡವಾಳ ಹೂಡಿಕೆಗೆ ಜಮೀನಿನ ಅಗತ್ಯವಿದೆ. ಜಮೀನು ಸ್ವಾಧೀನಪಡಿಸಿ ಕೈಗಾರಿಕೆಗಳನ್ನು ಪ್ರಾರಂಭಿಸಲು ಸರ್ಕಾರ ನೀಡಬೇಕಾಗುತ್ತದೆ.
• 1777 ಎಕ್ರೆ ಜಮೀನು ದೇವನಹಳ್ಳಿ ತಾಲೂಕಿನಲ್ಲಿ ಸ್ವಾಧೀನಪಡಿಸಿಕೊಂಡು, ಅಲ್ಲಿ ಏರೋಸ್ಪೇಸ್ ಪ್ರಾರಂಭಿಸುವುದು ಸರ್ಕಾರದ ಉದ್ದೇಶ. ಬೆಂಗಳೂರಿನ ಸಮೀಪದಲ್ಲಿ ಇದಕ್ಕೆ ಜಮೀನು ಒದಗಿಸಲು ಕೋರಿಕೆ ಸ್ವೀಕರಿಸಲಾಗಿತ್ತು.
• ರಾಜ್ಯದಲ್ಲಿ ಭೂಸ್ವಾಧೀನ ವಿರುದ್ಧ ಈ ಮಟ್ಟದ ಪ್ರತಿಭಟನೆ ನಡೆದಿಲ್ಲ. ಅದು ಫಲವತ್ತಾದ ವ್ಯವಸಾಯಕ್ಕೆ ಯೋಗ್ಯವಾದ ಭೂಮಿ. ಅಲ್ಲಿನ ರೈತರು ಆ ಜಮೀನಿನ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ. ಆದ್ದರಿಂದ ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕೆಂದು ಹೋರಾಟಗಾರರು ಸ್ಪಷ್ಟಪಡಿಸಿದ್ದಾರೆ.
• ಸರ್ಕಾರ ರೈತರು, ಜಮೀನುದಾರರು ಸೇರಿದಂತೆ ಎಲ್ಲರ ಅಹವಾಲುಗಳನ್ನು ಆಲಿಸಿದೆ. ರಾಜ್ಯದ ಅಭಿವೃದ್ದಿಗೆ, ಬೆಳವಣಿಗೆಗೆ ಕೈಗಾರಿಕೆ ಉತ್ತೇಜನ ನೀಡುವುದು ಅಗತ್ಯವಿದೆ.
• ಯಾವುದೇ ಕಾರಣಕ್ಕೂ ಜಮೀನು ಸ್ವಾಧೀನ ಕೈಬಿಟ್ಟರೆ ಈ ಕೈಗಾರಿಕೆ ಬೇರೆ ಕಡೆ ಹೋಗುವ ಸಾಧ್ಯತೆ ಇದೆ. ಆದರೂ ಸರ್ಕಾರ ರೈತಪರವಾಗಿದ್ದು, ಅವರ ಬೇಡಿಕೆಗಳನ್ನು ಪರಿಗಣಿಸಿ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡಲು ನಿರ್ಧರಿಸಿದೆ.
ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…
ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ...? ವಾರ್ಡ್ ನಂ.: 1 ಹೆಸರು: ಶ್ವೇತಾ…
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಮತದಾನ ಡಿ.21ರಂದು ನಡೆದಿತ್ತು. ಇಂದು (ಡಿ.24)ರಂದು ಮತ ಎಣಿಕೆ ನಡೆದಿದ್ದು, ಬಿಜೆಪಿ 14, ಕಾಂಗ್ರೆಸ್…
ಮರ್ಯಾದಾ ಹತ್ಯೆ........ ಕ್ಷಮಿಸಿ ಬಿಡು ಮಾನ್ಯ ಎಂಬ ಹುಬ್ಬಳ್ಳಿ ಹತ್ತಿರದ ನನ್ನ ಗರ್ಭಿಣಿ ತಂಗಿಯೇ..... ನಮ್ಮದೇ ದೇಶದ, ನಮ್ಮದೇ…
ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…