
ಚರಂಡಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಇಂದು ತಾಲೂಕಿನ ದರ್ಗಾಪುರದಲ್ಲಿ ನಡೆದಿದೆ.
ಮೃತ ದುರ್ದೈವಿಯನ್ನು ಬಿಹಾರ ಮೂಲದ ಸುಧೀರ್ ಕುಮಾರ್ ಚೌಧರಿ (35), ಎಂದು ಗುರುತಿಸಲಾಗಿದೆ.
ಕುಡಿದ ನಶೆಯಲ್ಲಿ ಚರಂಡಿಗೆ ಬಿದ್ದು ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ.
ಕಳೆದ ನಾಲ್ಕೈದು ದಿನಗಳಿಂದೆ ಬಿಹಾರದಿಂದ ದೊಡ್ಡಬಳ್ಳಾಪುರಕ್ಕೆ ಕೆಲಸಕ್ಕೆಂದು ಬಂದಿದ್ದು, ಇಂದು ಸಾವನ್ನಪ್ಪಿದ್ದಾನೆ.
ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ….