ಚಲಿಸುತ್ತಿದ್ದ ಎಲೆಕ್ಟ್ರಿಕ್ ಬೈಕ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿರುವ ಘಟನೆ ತಾಲೂಕಿನ ಕನ್ನಮಂಗಲ ಗೇಟ್ ಬಳಿ ನಿನ್ನೆ ಸಂಜೆ ಸುಮಾರು 6 ಗಂಟೆ ಸಮಯದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಬೈಕ್ ಗೆ ಅಳವಡಿಸಿದ್ದ ಬ್ಯಾಟರಿಯಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಕಾಣಿಸಿಕೊಂಡಿದೆ. ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ನಿವಾಸಿ ಸಂತೋಷ್ ಎಂಬುವವರು ಚಲಾಯಿಸುತ್ತಿದ್ದರು.
ಬೈಕ್ ಓಡಿಸುತ್ತಿದ್ದಾಗ ಏಕಾಏಕಿ ಸೀಟ್ ಓಪನ್ ಆಗಿ, ಬೈಕ್ ಸವಾರ ಕೆಳಗೆ ಇಳಿಯುತ್ತಿದ್ದಂತೆ ಸಂಪೂರ್ಣವಾಗಿ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಬೈಕ್ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ದೊಡ್ಡಬೆಳವಂಗಲ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…