ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ: ಹ್ಯಾಂಡ್ ಬ್ರೇಕ್ ಸುಟ್ಟಹೋದ ಹಿನ್ನೆಲೆ ಡ್ರೈವರ್ ಇಲ್ಲದೇ ಜನರೆಡೆಗೆ ನುಗ್ಗಿದ ಕಾರು: ದಿಕ್ಕಾಪಾಲಾಗಿ ಓಡಿದ ವಾಹನ‌ ಸವಾರರು

ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಡ್ರೈವರ್ ಕಾರಿನಿಂದ ಇಳಿದು ತನ್ನ ಪ್ರಾಣವನ್ನು ಉಳಿಸಿಕೊಂಡಿದ್ದಾನೆ. ಆದರೆ, ಕಾರು ಚಲನೆಯಲ್ಲಿತ್ತು. ಈ ಘಟನೆ ಎಲಿವೇಟೆಡ್ ರಸ್ತೆಯಲ್ಲಿ ಅಜ್ಮೀರ್‌ನಿಂದ ಸೋದಲಾಲ ಕಡೆಗೆ ಇಳಿಯುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಎಂಜಿ ಹೆಕ್ಟರ್ ಕಾರು ಬೆಂಕಿಗೆ ಆಹುತಿಯಾಗಿದೆ. ರಸ್ತೆಯಲ್ಲಿ ವಾಹನಗಳು ಚಲಿಸುತ್ತಿದ್ದವು, ಚಲಿಸುತ್ತಿದ್ದ ವಾಹನಗಳ ಮಧ್ಯೆ ಈ ಬೆಂಕಿ ಹೊತ್ತಿಕೊಂಡಿದ್ದ ಕಾರು ನುಗ್ಗಿತ್ತು. ಆಗ ವಾಹನ ಸವಾರರು ಕೆಲಕಾಲ ಭಯಪಟ್ಟು ತಮ್ಮ ವಾಹನಗಳನ್ನು ಎಲ್ಲೆಂದರಲ್ಲಿ ಬಿಟ್ಟು ಓಡಿಹೋದರು.‌ ಸುಟ್ಟು ಕರಕಲಾಗಿದ್ದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಕೊನೆಗೆ ನಿಂತಿತು. ರಸ್ತೆಯಲ್ಲಿ ಸಂಚಾರ ದಟ್ಟಣೆ ಇದ್ದರೂ ಯಾರಿಗೂ ಗಾಯಗಳಾಗಿಲ್ಲ. ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿತ್ತು.

ಮಾನಸ ಸರೋವರದ ಪತ್ರಾಕರ್ ಕಾಲೋನಿಯಲ್ಲಿರುವ ದಿವ್ಯ ದರ್ಶನ್ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿರುವ ಜಿತೇಂದ್ರ ಜಂಗಿದ್ ಕಾರನ್ನು ಚಲಾಯಿಸುತ್ತಿದ್ದರು. ಜಿತೇಂದ್ರ ಅವರು 2021 ರಲ್ಲಿ ಕಾರನ್ನು ಖರೀದಿಸಿದರು.

ಎಲಿವೇಟೆಡ್ ರಸ್ತೆಯಿಂದ ಇಳಿಯುವಾಗ‌ ಎಸಿಯಿಂದ ಹೊಗೆ ಬರಲು ಪ್ರಾರಂಭಿಸಿತು. ನನ್ನ ಅಣ್ಣನಿಗೆ ಫೋನ್ ಮಾಡಿದಾಗ ಕಾರಿನ ಬಾನೆಟ್ ತೆರೆದು ನೋಡುವಂತೆ ಹೇಳಿದರು. ಕಾರಿನಿಂದ ಇಳಿದು ಬಾನೆಟ್ ತೆರೆದಾಗ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಜನ ಜಮಾಯಿಸಿದರು. ಕಾರಿನಲ್ಲಿ ವೈರಿಂಗ್ ಸುಟ್ಟುಹೋದಾಗ ಹ್ಯಾಂಡ್ ಬ್ರೇಕ್ ಹಾಕಲು ಆಗಲಿಲ್ಲ. ನಾಲ್ಕೂ ಕಿಟಕಿಗಳನ್ನು ತೆರೆದು ಕೆಳಗೆ ಇಳಿಯುವಷ್ಟರಲ್ಲಿ ಬಾನೆಟ್ ನಿಂದ ಬೆಂಕಿ ಹೊತ್ತಿಕೊಂಡಿತು.  ಸುತ್ತಲೂ ಜನ ಜಮಾಯಿಸಿದರು. ಅಷ್ಟರಲ್ಲಿ ಯಾರೋ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಬೆಂಕಿಯ ರಭಸಕ್ಕೆ ವೈರಿಂಗ್ ಸುಟ್ಟು ಬೂದಿಯಾಗಿದ್ದು, ಕಾರಿನ ಒಂದು ಟೈರ್ ಕೂಡ ಸಿಡಿದಿದೆ ಎಂದು ಕಾರಿನ ಚಾಲಕ ತಿಳಿಸಿದ್ದಾನೆ.

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

5 hours ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

9 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

11 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

11 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

13 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

17 hours ago