ಚಲಿಸುವ ಗೂಡ್ಸ್ ರೈಲಿಗೆ ಹತ್ತಲು ಹೋಗಿ ಯುವಕನೋರ್ವ ಯಡವಟ್ಟು ಮಾಡಿಕೊಂಡಿದ್ದಾನೆ. ರೈಲಿಗೆ ಹತ್ತಲು ಹೋಗಿ ಆಯಾತಪ್ಪಿ ಕೆಳಗೆ ಬಿದ್ದಿದ್ದಾನೆ. ಕೆಳಗೆ ಬಿದ್ದ ಕೂಡಲೇ ರೈಲಿನ ಚಕ್ರಕ್ಕೆ ಕಾಲಿನ ಪಾದ ಸಿಲುಕಿದೆ. ಈ ಹಿನ್ನೆಲೆ ಕಾಲಿನ ಪಾದ ನುಜ್ಜುಗುಜ್ಜಾಗಿದೆ.
ದೊಡ್ಡಬಳ್ಳಾಪುರ ಮೂಲದ ಹೇಮಂತ್ ಕುಮಾರ್ (28) ಯಡವಟ್ಟು ಮಾಡಿಕೊಂಡ ಯುವಕ.
ಕತ್ತಲಲ್ಲಿ ಹಳಿ ದಾಟಲು ಹೋಗಿದ್ದಾನೆ. ಹಳಿಯಲ್ಲಿ ಗೂಡ್ಸ್ ರೈಲು ನಿಂತಿತ್ತು. ಈ ಯುವಕ ದುರಾದೃಷ್ಟವಷಾತ್ ಗೂಡ್ಸ್ ರೈಲು ಹತ್ತಿದಾಗ ರೈಲು ಮುಂದಕ್ಕೆ ಚಲಿಸಿದೆ. ತಕ್ಷಣ ಈ ಯುವಕ ಕೆಳಗೆ ಬಿದ್ದಿದ್ದಾನೆ. ಆಗ ಕಾಲು ರೈಲಿಗೆ ಸಿಲುಕಿದೆ ಎಂದು ತಿಳಿದುಬಂದಿದೆ.
ಘಟನೆ ದೊಡ್ಡಬಳ್ಳಾಪುರದ ರೈಲ್ವೆ ನಿಲ್ದಾಣದ ಬಳಿ ಇಂದು ಮುಂಜಾನೆ ಸುಮಾರು 3 ಗಂಟೆಯಲ್ಲಿ ನಡೆದಿದೆ. ವಿಚಾರ ತಿಳಿದ ರೈಲ್ವೆ ಸಿಬ್ಬಂದಿ ಹಾಗೂ ರೈಲ್ವೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಗಾಯಾಳನ್ನು ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಿದ್ದಾರೆ.
ರೈಲ್ವೆ ಅಧಿಕಾರಿಗಳಿಂದ ತನಿಖೆ ಮುಂದುವರಿದಿದೆ.
ಭಟ್ಕಳದ ಹೆಬಳೆ ತೆಂಗಿನಗುಂಡಿಯಲ್ಲಿರುವ ಶ್ರೀ ಬ್ರಹ್ಮಲಿಂಗೇಶ್ವರ ನಾಗದೇವತಾ ಪ್ರಸನ್ನ ದೇವಸ್ಥಾನದಲ್ಲಿ ಭಾನುವಾರ ಹಾಡುಹಗಲೇ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಭಟ್ಕಳ…
ಸುಪ್ರಭಾತ.......... ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ…
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…