Categories: ವಿಜಯನಗರ

ಚಾಮರಾಜಪೇಟೆಯಲ್ಲಿ ದನಗಳಿಗೆ ಹಿಂಸೆ ನೀಡಿರುವ ಘಟನೆ ಅತ್ಯಂತ ಅಮಾನವೀಯ-ತಪ್ಪಿತಸ್ಥರನ್ನು ಪತ್ತೆಹಚ್ಚಿ ಖಂಡಿತಾ ಶಿಕ್ಷೆಗೆ ಒಳಪಡಿಸಲಾಗುವುದು- ಸಿಎಂ ಸಿದ್ದರಾಮಯ್ಯ

ಚಾಮರಾಜಪೇಟೆಯಲ್ಲಿ ದನಗಳಿಗೆ ಹಿಂಸೆ ನೀಡಿರುವ ಘಟನೆ ಅತ್ಯಂತ ಅಮಾನವೀಯ. ಪ್ರಾಣಿ ಹಿಂಸೆ ಮಾಡುವುದು ಅಪರಾಧ, ತಪ್ಪಿತಸ್ಥರನ್ನು ಪತ್ತೆಹಚ್ಚಿ ಖಂಡಿತಾ ಶಿಕ್ಷೆಗೆ ಒಳಪಡಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈವರೆಗೆ ಕೃತ್ಯ ಎಸಗಿದವರ ಮಾಹಿತಿ ದೊರೆತಿಲ್ಲ. ಪೊಲೀಸ್ ಆಯುಕ್ತರಿಗೆ ತಪ್ಪಿತಸ್ಥರನ್ನು ಪತ್ತೆ ಹಚ್ಚಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ್ದೇನೆ. ಕಾನೂನು ತನ್ನ ಕಾರ್ಯ ಮಾಡುತ್ತಿರುವ ಹೊರತಾಗಿಯೂ ಹಿಂದೂ ಸಂಘಟನೆಗಳ ಪ್ರತಿಭಟನೆ ಮಾಡುತ್ತಿರುವುದು ರಾಜಕೀಯ ಪ್ರೇರಿತವಾಗಿದೆ ಎಂದು ಹೇಳಿದ್ದಾರೆ.

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯ ಬಗ್ಗೆ ಪರ – ವಿರೋಧ ಅಭಿಪ್ರಾಯಗಳು ವ್ಯಕ್ತವಾಗುವುದು ಸಹಜ. 160 ಕೋಟಿ ರೂ. ವೆಚ್ಚದಲ್ಲಿ ಸಿದ್ಧಪಡಿಸಲಾದ ವರದಿಯನ್ನು ಸ್ವೀಕರಿಸಲಾಗಿದ್ದು, ವರದಿಯ ಜಾರಿಯ ಬಗ್ಗೆ ತೀರ್ಮಾನ ಕೈಗೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗುವುದು ಎಂದು ತಿಳಿಸಿದ್ದಾರೆ.

Ramesh Babu

Journalist

Share
Published by
Ramesh Babu

Recent Posts

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

7 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

9 hours ago

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್: ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸಲು ಸಭೆ

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…

19 hours ago

ಟಿಎಪಿಎಂಸಿಎಸ್ ಚುನಾವಣೆ ಸೋಲಿಗೆ ನಾನೇ ನೇರ ಕಾರಣ- ಸೋಲಿನ ಸಂಪೂರ್ಣ ಜವಾಬ್ದಾರಿ ಶಾಸಕನಾಗಿ ನಾನೇ ತೆಗೆದುಕೊಳ್ಳುತ್ತೇನೆ- ಶಾಸಕ ಧೀರಜ್‌ ಮುನಿರಾಜ್

ಟಿಎಪಿಎಂಸಿಎಸ್ ಚುನಾವಣೆ ಸೋಲಿಗೆ ನಾನೇ ನೇರ ಕಾರಣ. ಸೋಲಿನ ಸಂಪೂರ್ಣ ಜವಾಬ್ದಾರಿ ಶಾಸಕನಾಗಿ ನಾನೇ ತೆಗೆದುಕೊಳ್ಳುತ್ತೇನೆ ಎಂದು ಶಾಸಕ ಧೀರಜ್‌…

22 hours ago

ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ

ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮದಿಂದ ಹೊಲಿಗೆ ಯಂತ್ರ ಪಡೆಯಲು ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಪ್ರವರ್ಗ-3-ಬಿ…

23 hours ago

ದೊಡ್ಡಬಳ್ಳಾಪುರ ನೂತನ ತಹಶೀಲ್ದಾರ್ ಆಗಿ ಮಲ್ಲಪ್ಪ ನೇಮಕ: ಶ್ರೀ ಘಾಟಿ ಸುಬ್ರಹ್ಮಣ್ಯ ದೇವರ ದರ್ಶನ ಪಡೆದ ನೂತನ ತಹಶೀಲ್ದಾರ್ ಮಲ್ಲಪ್ಪ

ದೊಡ್ಡಬಳ್ಳಾಪುರದ ನೂತನ ತಹಶೀಲ್ದಾರ್ ಆಗಿ ಮಲ್ಲಪ್ಪ ನೇಮಕಗೊಂಡಿದ್ದಾರೆ. ಈ ಹಿನ್ನೆಲೆ ಇಂದು ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ…

1 day ago