ಚಾಲಕನ ನಿಯಂತ್ರಣ ತಪ್ಪಿ ಕಂಬಕ್ಕೆ ಆಟೋ ಡಿಕ್ಕಿ ಹೊಡೆದಿದ್ದು, ಆಟೋದಲ್ಲಿ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ಈ ಘಟನೆ ಸಾಸಲು ಹೋಬಳಿಯ ಆರೂಢಿ ಸಮೀಪದ ಹನುಮಂತಪುರ ಬಳಿ ನಡೆದಿದೆ.
ಗಾಯಗೊಂಡ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲು 108 ಆಂಬುಲೆನ್ಸ್ ಗೆ ಕರೆ ಮಾಡಲಾಗಿತ್ತು. ಆದರೆ, ಸ್ಥಳಕ್ಕೆ 108 ಆಂಬುಲೆನ್ಸ್ ಇದೂವರೆಗೂ ಬಂದಿಲ್ಲ. ಗಾಯಾಳುಗಳು ತೀವ್ರ ರಕ್ತ ಸ್ರಾವದಿಂದ ನರಳಾಡುತ್ತಿದ್ದಾರೆ. ಅವರ ಜೀವಕ್ಕೆ ಏನಾದರೂ ಅಪಾಯವಾದರೆ ಯಾರು ಹೊಣೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಆಟೋದಲ್ಲಿ ದಿಢೀರನೇ ತಾಂತ್ರಿಕ ಸಮಸ್ಯೆ ಕಂಡುಬಂದು, ಚಾಲಕನ ನಿಯಂತ್ರಣ ತಪ್ಪಿ ರಸ್ತೆಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಪರಿಣಾಮ ವೃದ್ಧರು, ಮಹಿಳೆಯರು, ಮಕ್ಕಳಿಗೆ ಗಂಭೀರಗಾಯಗಳಾಗಿವೆ.
ಘಟನೆ ನಡೆದು ಹಲವು ಗಂಟೆಗಳು ಕಳೆದರೂ 108 ಆಂಬುಲೆನ್ಸ್ ಬಾರದ ಹಿನ್ನೆಲೆ ಖಾಸಗಿ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಲಾಯಿತು ಎಂದು ಸ್ಥಳೀಯರು ತಿಳಿಸಿದರು.
ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…..
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ….
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…