
ದೊಡ್ಡಬಳ್ಳಾಪುರ: ತಾಲೂಕಿನ ಕೆಸ್ತೂರು ಗೇಟ್ ಸಮೀಪ ಹಾದುಹೋಗಿರುವ ದಾಬಸ್ ಪೇಟೆ – ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.
ಘಟನೆಯಲ್ಲಿ ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ದೊಡ್ಡಬಳ್ಳಾಪುರದಿಂದ ದಾಬಸ್‌ಪೇಟೆ ಕಡೆಗೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಮೊದಲು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು, ಬಳಿಕ ರಸ್ತೆ ಬದಿಯ ಗುಂಡಿಗೆ ಉರುಳಿ ಬಿದ್ದಿದೆ.
ಅಪಘಾತದ ವೇಳೆ ಕಾರು ಟ್ರಾನ್ಸ್‌ಫಾರ್ಮರ್‌ಗೆ ಕೆಲವೇ ಅಡಿ ದೂರದಲ್ಲಿ ನಿಂತಿದ್ದು, ಸ್ವಲ್ಪ ಮುಂದೆ ಹೋಗಿದ್ದರೆ ಮತ್ತಷ್ಟು ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು. ಆದರೆ ಅದೃಷ್ಟವಶಾತ್ ಚಾಲಕ ಯಾವುದೇ ಗಂಭೀರ ಗಾಯಗಳಿಲ್ಲದೆ ಪಾರಾಗಿದ್ದಾನೆ.