ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಪ್ರಾಣಾಪಾಯದಿಂದ ಪಾರಾದ ಚಾಲಕ

ದೊಡ್ಡಬಳ್ಳಾಪುರ: ತಾಲೂಕಿನ ಕೆಸ್ತೂರು ಗೇಟ್ ಸಮೀಪ ಹಾದುಹೋಗಿರುವ ದಾಬಸ್ ಪೇಟೆ – ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.

ಘಟನೆಯಲ್ಲಿ ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ದೊಡ್ಡಬಳ್ಳಾಪುರದಿಂದ ದಾಬಸ್‌ಪೇಟೆ ಕಡೆಗೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಮೊದಲು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು, ಬಳಿಕ ರಸ್ತೆ ಬದಿಯ ಗುಂಡಿಗೆ ಉರುಳಿ ಬಿದ್ದಿದೆ.

ಅಪಘಾತದ ವೇಳೆ ಕಾರು ಟ್ರಾನ್ಸ್‌ಫಾರ್ಮರ್‌ಗೆ ಕೆಲವೇ ಅಡಿ ದೂರದಲ್ಲಿ ನಿಂತಿದ್ದು, ಸ್ವಲ್ಪ ಮುಂದೆ ಹೋಗಿದ್ದರೆ ಮತ್ತಷ್ಟು ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು. ಆದರೆ ಅದೃಷ್ಟವಶಾತ್ ಚಾಲಕ ಯಾವುದೇ ಗಂಭೀರ ಗಾಯಗಳಿಲ್ಲದೆ ಪಾರಾಗಿದ್ದಾನೆ.

Ramesh Babu

Journalist

Recent Posts

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

2 minutes ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

27 minutes ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

2 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

6 hours ago

ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯನವರದ್ದು ಕುಮಾರಸ್ವಾಮಿ ತರಹದ ಚರಿತ್ರೆಯಲ್ಲ: ಎಚ್.ಡಿ.ಕೆ ವಿರುದ್ಧ ಸಚಿವ ಚಲುವರಾಯಸ್ವಾಮಿ ತೀವ್ರ ವಾಗ್ದಾಳಿ

ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…

18 hours ago

ರಾಜಾನುಕುಂಟೆ ಬಳಿ ರೈಲು ಬೋಗಿಗಳಿಗೆ ಬೆಂಕಿ: ಎರಡು ಬೋಗಿಗಳು ಸುಟ್ಟು ಭಸ್ಮ

ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…

24 hours ago