
ಚಾಲಕನ ನಿಯಂತ್ರಣ ತಪ್ಪಿದ ಕಾರು ಹೆದ್ದಾರಿಯ ಡಿವೈಡರ್ ಮೇಲೆ ಹತ್ತಿರುವ ಘಟನೆ ದೊಡ್ಡಬಳ್ಳಾಪುರ ನಗರದ ಪೊಲೀಸ್ ಠಾಣಾ ಸಮೀಪದ ಚರ್ಚ್ ಬಳಿ ನಡೆದಿದೆ.
ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ… ಸ್ಥಳಕ್ಕೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ಹೆದ್ದಾರಿಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಪೊಲೀಸರು ವಾಹನ ದಟ್ಟಣೆಯನ್ನು ನಿವಾರಿಸಿದ್ದಾರೆ..
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…..