ಬೆಂಗಳೂರುನಿಂದ ಅನಂತಪುರಕ್ಕೆ ಹೋಗುವ ವೇಳೆ RPGT ಬಸ್ ಚಾಲಕನ ನಿಯಂತ್ರಣ ತಪ್ಪಿ ತಾಲೂಕಿನ ಮಾಕಳಿದುರ್ಗಾ ರೈಲ್ವೆ ನಿಲ್ದಾಣ ಸಮೀಪ ಪಲ್ಟಿ ಹೊಡೆದಿದ್ದು, ಇಬ್ಬರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಗಾಯಗೊಂಡ ಪ್ರಯಾಣಿಕರನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.
ಮಳೆಯಿಂದಾಗಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿರುವ ಬಸ್ ಪಲ್ಟಿ ಹೊಡೆದಿದೆ ಎನ್ನಲಾಗುತ್ತಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ….