ಚಾಲಕನ ನಿಯಂತ್ರಣ ತಪ್ಪಿ ಫ್ಯಾಕ್ಟರಿ ವ್ಯಾನ್ ಪಲ್ಟಿ: ವ್ಯಾನಿನಲ್ಲಿದ್ದವರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಫ್ಯಾಕ್ಟರಿ ವ್ಯಾನ್ ಪಲ್ಟಿಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಗುಂಡಮಗೆರೆ ರಸ್ತೆಯ ಗ್ರೀನ್ ವ್ಯಾಲಿ ಸಮೀಪ ಇಂದು ಸಂಜೆ ಸುಮಾರು 6:30ರಲ್ಲಿ ನಡೆದಿದೆ…

ಘಟನೆಯಲ್ಲಿ ವ್ಯಾನಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಫ್ಯಾಕ್ಟರಿ ಕೆಲಸ ಮುಗಿಸಿಕೊಂಡು ಎಂದಿನಂತೆ ತಮ್ಮ ತಮ್ಮ ಊರುಗಳಿಗೆ ತೆರಳಲು ನಿಗದಿಗೊಂಡಿದ್ದ ವ್ಯಾನ್ ನಲ್ಲಿ ಸುಮಾರು 25-30 ಮಹಿಳೆಯರು ಬರುತ್ತಿದ್ದರು. ವ್ಯಾನ್ ಚಾಲಕ ಮದ್ಯಪಾನ ಮಾಡಿದ್ದ ಎನ್ನಲಾಗಿದೆ. ಪಾನಮತ್ತಿನಲ್ಲಿ ಎದ್ವಾತದ್ವಾ ವಾಹನ ಚಲಾಯಿಸಿದ್ದರಿಂದ ಈ ಘಟನೆ ನಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಇನ್ನೂ ವ್ಯಾನ್ ಪಲ್ಟಿ ಹೊಡೆದ ಕೂಡಲೇ ಚಾಲಕ ಪ್ರಾಣಾಪಾಯದಿಂದ ಪಾರಾಗಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ…

ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ಅವಶ್ಯಕತೆ ಇರುವುದರಿಂದ ಅಂಬ್ಯುಲೆನ್ಸ್ ಸ್ಥಳಕ್ಕೆ ದಾವಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ….

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ….

Leave a Reply

Your email address will not be published. Required fields are marked *

error: Content is protected !!