ಕೃಷಿ ಸಂಬಂಧಿಸಿದ ಔಷಧ ತುಂಬಿದ್ದ ಬೊಲೆರೊ ಪಿಕ್ ಅಪ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಮುಗುಚಿ ಬಿದ್ದಿರುವ ಘಟನೆ ಘಾಟಿ ಹಾಗೂ ಮಾಕಳಿ ರೈಲ್ವೆ ನಿಲ್ದಾಣಕ್ಕೆ ಸಂಪರ್ಕಿಸುವ ಮಾರ್ಗ ಮಧ್ಯೆ ಬರುವ ದೊಡ್ಡಹಳ್ಳ ಬಳಿ ಇಂದು ಬೆಳಗ್ಗೆ ಸುಮಾರು 6 ಗಂಟೆಯಲ್ಲಿ ನಡೆದಿದೆ.
ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಬೊಲೆರೊ ಪಿಕ್ ಅಪ್ ವಾಹನದ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.
ಇಂದು ಬೆಳಗ್ಗೆ ಘಾಟಿ ಸುತ್ತಾಮುತ್ತ ಜಿಟಿಜಿಟಿ ಮಳೆಯಾಗಿದ್ದು, ಮಾಕಳಿ ಕಡೆಯಿಂದ ಘಾಟಿ ಕಡೆ ಬರುತ್ತಿದ್ದಾಗ ಇಳಿಜಾರು ಇದ್ದ ಕಾರಣ ಎಷ್ಟೇ ಬ್ರೇಕ್ ಹಾಕಿದರೂ ಚಾಲಕನ ಹತೋಟಿಗೆ ಸಿಗದೆ ಸೇತುವೆ ಮೇಲಿಂದ ಹಳಕ್ಕೆ ಮುಗುಚಿ ಬಿದ್ದಿದೆ.
ಈ ರಸ್ತೆಯಲ್ಲಿ ದೊಡ್ಡಹಳ್ಳಕ್ಕೆ ಸಣ್ಣ ಸೇತುವೆ ನಿರ್ಮಾಣ ಮಾಡಲಾಗಿದೆ. ಇಲ್ಲಿ ಎರಡು ಕಡಿದಾದ ತಿರುವುಗಳು ಇದ್ದು, ಇವುಗಳನ್ನು ವೈಜ್ಞಾನಿಕವಾಗಿ ದುರಸ್ತಿ ಮಾಡದೇ ರಸ್ತೆ ಹಾಗೂ ಸೇತುವೆ ನಿರ್ಮಾಣ ಮಾಡಲಾಗಿದೆ.
ಈ ಸೇತುವೆ ಬಳಿ ಒಂದಿಲ್ಲೊಂದು ಅಪಘಾತಗಳು ಸಂಭವಿಸುತ್ತಲೇ ಇರುತ್ತವೆ. ಕೂಡಲೇ ಸಂಬಂಧಪಟ್ಟ ಇಲಾಖೆ ಎಚ್ಚೆತ್ತು ವೈಜ್ಞಾನಿಕವಾಗಿ ರಸ್ತೆ ಕಾಮಗಾರಿ ನಡೆಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ದೊಡ್ಡಬಳ್ಳಾಪುರ ನಗರಸಭೆ ವ್ಯಾಪ್ತಿಯ ರೋಜಿಪುರ ಬಡಾವಣೆ ಹಾಗೂ ಕೋರ್ಟ್ ಮುಂಭಾಗದ ನಾಲ್ಕನೇ ವಾರ್ಡ್ ವಿನಾಯಕ ನಗರ ಗಡಿ ಭಾಗದಲ್ಲಿರುವ 1ನೇ…
ದೊಡ್ಡಬಳ್ಳಾಪುರ ತಾಯಿ-ಮಗು ಆಸ್ಪತ್ರೆಯಲ್ಲಿ ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದೆ 9 ತಿಂಗಳ ತುಂಬು ಗರ್ಭಿಣಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ಇಂದು…
ಎರಡು ಮುಖಗಳ, ವಿವಿಧ ಆಯಾಮಗಳ ಒಂದು ವಿಮರ್ಶೆ. ಭಾರತದ ಸಂವಿಧಾನ ಪ್ರತಿಪಾದಿಸುವ ಆಶಯಗಳ ಹಿನ್ನೆಲೆಯಲ್ಲಿ....... ಭಾರತದ ಸಂವಿಧಾನ ಮತ್ತು ಅದರ…
ದೊಡ್ಡಬಳ್ಳಾಪುರ: ಕಂದಾಯ ಇಲಾಖೆಯು ಭೂ ಸುರಕ್ಷಾ ಮಹತ್ವಾಕಾಂಕ್ಷಿ ಯೋಜನೆಯಡಿಯಲ್ಲಿ ತಾಲ್ಲೂಕು ಕಚೇರಿ, ಎ.ಸಿ ಕಚೇರಿ ಮತ್ತು ಡಿ.ಸಿ ಕಚೇರಿಗಳಲ್ಲಿರುವ ಪ್ರಮುಖ…
ದೊಡ್ಡಬಳ್ಳಾಪುರದ ಹಲವು ಭಾಗಗಳಲ್ಲಿ ಕೆಲವು ಕಾರ್ಖಾನೆಗಳು ಕಲುಷಿತ ಕೆಮಿಕಲ್ ತ್ಯಾಜ್ಯ, ಇನ್ನಿತರ ತ್ಯಾಜ್ಯವನ್ನು ಕೆರೆಗಳಿಗೆ, ಅರಣ್ಯ ಪ್ರದೇಶದಲ್ಲಿ ಸುರಿಯುತ್ತಿದ್ದಾರೆ. ಇದರಿಂದ…
ಕೂಸು ಇದ್ದ ಮನಿಗ ಬೀಸಣಿಕೆ ಯಾತಕ ? ಕೂಸು ಕಂದಯ್ಯ ಒಳ ಹೊರಗ ಆಡಿದರ ಬೀಸಣಿಕೆ ಗಾಳಿ ಸುಳಿದಾವ. ನಮ್ಮ…