ಆ.10ರಂದು ನಗರದ ಎಪಿಎಂಸಿ ಬಳಿ ನಡೆದ ಅಪಘಾತದಲ್ಲಿ ಗಂಭೀರ ಗಾಯ ಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಶಾಲಾ ಬಾಲಕಿ ಯಶಸ್ವಿನಿ. ಕಳೆದ ಆರು ದಿನಗಳಿಂದ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯಶಸ್ವಿನಿ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು(ಆ.16) ಮುಂಜಾನೆ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.
ಕಳೆದ ಗುರುವಾರ ವೆಂಕಟೇಶ್ ತನ್ನ ಮಗಳನ್ನು ಶಾಲೆಗೆ ಬಿಡಲು ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ನಗರದ ಎಪಿಎಂಸಿ ಬಳಿ ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ವೆಂಕಟೇಶ್ ಸ್ಥಳದಲ್ಲೇ ಮೃತಪಟ್ಟಿದ್ದರು. ಹಿಂದೆ ಕುಳಿತಿದ್ದ ಶಾಲಾ ಬಾಲಕಿ ಯಶಸ್ವಿನಿ ಅವರಿಗೆ ಗಂಭೀರ ಗಾಯಗಳಾಗಿದ್ದವು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ನೂರುಕಾಲ ಬದುಕಿ ಬಾಳಬೇಕಾದ ಬಾಲಕಿ ಯಶಸ್ವಿನಿ ಬಾಳಲ್ಲಿ ವಿಧಿಯಾಟ ನಡೆದಿದೆ.ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ.