ಚಿಕ್ಕನಹಳ್ಳಿಯಲ್ಲಿ ರಾಸುಗಳಿಗೆ ವಿಮೆ ಅಭಿಯಾನ

ಕೋಲಾರ: ಹಾಲು ಉತ್ಪಾದಕರು ತಮ್ಮ ರಾಸುಗಳಿಗೆ ಜೀವ ವಿಮೆ ಮಾಡಿಸುವ ಮೂಲಕ ಆಕಸ್ಮಿಕವಾಗಿ ಜೀವ ಹಾನಿಯಿಂದ ಉಂಟಾಗುವ ಆರ್ಥಿಕ ನಷ್ಟಕ್ಕೆ ಸಹಕಾರಿಯಾಗಲಿದ್ದು,  ಪ್ರತಿಯೊಬ್ಬ ಹಾಲು ಉತ್ಪಾದಕರು ಸಹ ವಿಮೆ ಮಾಡಿಸಿಕೊಳ್ಳಿ ಎಂದು ಕೋಚಿಮುಲ್ ವೈದ್ಯಾಧಿಕಾರಿ ಆಶ್ರಫ್ ಅಹಮದ್ ತಿಳಿಸಿದರು.

ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಗ್ರಾಮದಲ್ಲಿ ಮಂಗಳವಾರ ರಾಸುಗಳಿಗೆ ವಿಮೆ ಮಾಡಿಸಿ ಮಾತನಾಡಿದ ಅವರು, ಹೈನುಗಾರಿಕೆಯು ಗ್ರಾಮೀಣ ಜನರ ಬದುಕಿಗೆ ಆಸರೆಯಾಗಿದ್ದು, ರಾಸುಗಳಿಗೆ ವಿಮೆ ಮಾಡಿಸಿ ಅದರಿಂದ ಸಿಗುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಜಿಲ್ಲೆಯಾದ್ಯಂತ ಹೈನುಗಾರಿಕೆ ಮಾಡಿಕೊಂಡು ಸಾವಿರಾರು ಕುಟುಂಬಗಳು ಬದುಕುತ್ತಿವೆ ಹಾಲು ಉತ್ಪಾದಕರ ಮಕ್ಕಳ ಶಿಕ್ಷ ಣಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಓದುವ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ ನೀಡಲಾಗುತ್ತಿದೆ ಇದರ ಸದುಪಯೋಗವನ್ನು ಪಡಿಸಿಕೊಳ್ಳಿ ಎಂದರು.

ಈ ಸಂದರ್ಭದಲ್ಲಿ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಆರ್.ಗೋಪಾಲಪ್ಪ, ಸಹಾಯಕ ಆರ್ ಬೈಚೇಗೌಡ, ಉತ್ಪಾದಕರು ಇದ್ದರು.

Leave a Reply

Your email address will not be published. Required fields are marked *