Categories: ಕೋಲಾರ

ಚಿಕ್ಕನಹಳ್ಳಿ ಡೇರಿಗೆ 2.33 ಲಕ್ಷ ನಿವ್ವಳ ಲಾಭ

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ 2023-24ನೇ ಸಾಲಿನ ಸರ್ವ ಸದಸ್ಯರ ಸಾಮಾನ್ಯ ವಾರ್ಷಿಕ ಸಭೆಯು ಗುರುವಾರ ಸಂಘದ ಕಛೇರಿಯಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಸಿ.ಅಮರೇಶ್ ಮಾತನಾಡಿ, ಸಂಘದ ಆಡಳಿತ ಮಂಡಳಿ ಹಾಗೂ ಹಾಲು ಉತ್ಪಾದಕರ ಸಹಕಾರದಿಂದ 2023-24ನೇ ಸಾಲಿನಲ್ಲಿ 3.79 ಲಕ್ಷ ಲಾಭಾಂಶ ಬಂದಿದ್ದು ಇದರಲ್ಲಿನ ನಿವ್ವಳ ಲಾಭವು 2.33 ಲಕ್ಷ ಬಂದಿದ್ದು ಈ ವರ್ಷವು ಹಾಲು ಉತ್ಪಾದಕಕರಿಗೆ ಶೇ 2.10% ಬೋನಸ್ ನೀಡಲಾಗುತ್ತದೆ ಎಂದರು,

ಸಹಕಾರ ಕ್ಷೇತ್ರದಲ್ಲಿ ಟೀಕೆಗಳು ಸಹಜವಾಗಿಯೇ ಇರುತ್ತವೆ ಟೀಕೆಗಳನ್ನು ಮೆಟ್ಟಿ ಪ್ರಮಾಣಿಕವಾಗಿ ಕೆಲಸ ಮಾಡುವ ಮೂಲಕ ಡೈರಿಯ ಮತ್ತಷ್ಟು ಅಭಿವೃದ್ಧಿಗೆ ಉತ್ಪಾದಕರು, ಆಡಳಿತ ಮಂಡಳಿಯ ಸದಸ್ಯರು, ಹಾಗೂ ಸಿಬ್ಬಂದಿ ಒಟ್ಟಾಗಿ ಕೆಲಸ ಮಾಡೋಣ ಡೈರಿಗೆ ಉತ್ಪಾದಕರೇ ಶಕ್ತಿಯಾಗಿದ್ದು ಗುಣಮಟ್ಟದ ಹಾಲು ಪೂರೈಕೆಯಿಂದ ಸಂಘದಿಂದ ಸಿಗುವ ವಿಶೇಷ ಸೌಲಭ್ಯಗಳನ್ನು ಪಡೆಯಬಹುದು ಎಂದರು.

ಈ ಸಂದರ್ಭದಲ್ಲಿ ಕೋಮುಲ್ ಉಪ ವ್ಯವಸ್ಥಾಪಕ ಡಾ.ಮಹೇಶ್ ಮಾತನಾಡಿ ಹಾಲಿನ ಡೇರಿಗಳು ಅಭಿವೃದ್ಧಿಯಾಗಬೇಕಾದರೆ, ಪಕ್ಷಾತೀತವಾಗಿ ಕೆಲಸ ಮಾಡಬೇಕು. ರೈತರು ಉತ್ತಮ ಕೊಬ್ಬಿನ ಅಂಶವಿರುವ ಹಾಲು ಸರಬರಾಜು ಮಾಡಿದಾಗ ಮಾತ್ರ ಡೇರಿ ಅಭಿವೃದ್ಧಿಯತ್ತ ಸಾಗಲು ಸಾಧ್ಯವಾಗುತ್ತದೆ ಹಸುಗಳ ಹೊಸ ಹೊಸ ರೋಗಗಳು ಬಂದ್ದು ಸಾಕಾಣಿಕೆ ಕಷ್ಟವಾಗಿದ್ದು ಹೆಚ್ಚಿನ ಕಾಳಜಿ ವಹಿಸಿ ಕಾಲಕಾಲಕ್ಕೆ ವಾಕ್ಸಿನ್ ಮಾಡಿಸಬೇಕು ಎಂದರು.

ಈ ಸಂದರ್ಭದಲ್ಲಿ ಕೋಲಾರ ಹಾಲು ಒಕ್ಕೂಟದ ವಿಸ್ತರಣಾಧಿಕಾರಿ ಎಸ್ ರಾಮಾಂಜಿನಪ್ಪ, ಆಡಳಿತ ಮಂಡಳಿ ನಿರ್ದೇಶಕರಾದ ಬಿ.ಶ್ರೀನಿವಾಸಪ್ಪ, ಸಿ ನಾಗರಾಜ್, ರಮೇಶ್, ಅಚ್ಚಪ್ಪ, ಸಿ.ಸಿ ಶ್ರೀನಿವಾಸ್‌, ಭಾಗ್ಯಲಕ್ಷ್ಮೀ, ಶಾರದದೇವಿ, ಸೊಣ್ಣಮ್ಮ ವೆಂಕಟಮ್ಮ ವಿಮಲಮ್ಮ, ಕಾರ್ಯದರ್ಶಿ ಆ‌ರ್ ಗೋಪಾಲಪ್ಪ, ಗ್ರಾಮಸ್ಥರಾದ ಸಿ.ಎಸ್ ಅಂಜನಗೌಡ, ವೆಂಕಟರಮಣಪ್ಪ, ಶಿವಕುಮಾರ್ ಸೇರಿದಂತೆ ಹಾಲು ಉತ್ಪಾದಕರು, ಗ್ರಾಮಸ್ಥರು ಇದ್ದರು,

Ramesh Babu

Journalist

Recent Posts

ತಹಶೀಲ್ದಾರ್‌ ಕಚೇರಿಗೆ ಶಾಸಕ ಕೊತ್ತೂರು ಮಂಜುನಾಥ್‌ ದಿಢೀರ್‌ ಭೇಟಿ: ಅಧಿಕಾರಿಗಳಿಗೆ ತರಾಟೆ, ತ್ವರಿತವಾಗಿ ಕಡತ ವಿಲೇವಾರಿಗೆ ಸೂಚನೆ

ಕೋಲಾರ: ಶಾಸಕ ಕೊತ್ತೂರು ಮಂಜುನಾಥ್‌ ಮಂಗಳವಾರ ಬೆಳಿಗ್ಗೆ ತಹಶೀಲ್ದಾರ್‌ ಕಚೇರಿಗೆ ದಿಢೀರನೇ ಭೇಟಿ ನೀಡಿ ಕಡತ ಪರಿಶೀಲಿಸಿ ಅಧಿಕಾರಿಗಳು ಹಾಗೂ…

2 hours ago

ಅಂತರ್ಜಲ ಪ್ರಮಾಣ ವರ್ಷದಿಂದ ವರ್ಷಕ್ಕೆ ಕುಸಿತ: ಒಂದು ತಿಂಗಳಲ್ಲಿ 1.15 ಮೀ. ನೀರಿನ ಮಟ್ಟ ಕುಸಿತ: ಬೋರ್‌ವೆಲ್‌ಗಳು ಬರಿದಾದ ನೀರು: ರೈತ ಕಂಗಾಲು

ದೊಡ್ಡಬಳ್ಳಾಪುರದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೆ ಹೆಚ್ಚುತ್ತಿದೆ‌. ಈ ಹಿನ್ನೆಲೆ ತೀವ್ರ ಜಲಕ್ಷಾಮದ ಕಾರ್ಮೋಡ ಆವರಿಸಿದಂತಿದೆ‌. ವರ್ಷದಿಂದ ವರ್ಷಕ್ಕೆ ಏರುತ್ತಿರುವ…

4 hours ago

ಹೃದಯವಿದ್ರಾವಕ ಘಟನೆ: ಒಂದೇ ದಿನ ಪತಿ-ಪತ್ನಿ ದಾರುಣ ಸಾವು

ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…

10 hours ago

ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…

11 hours ago

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

13 hours ago

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

22 hours ago