ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ 2023-24ನೇ ಸಾಲಿನ ಸರ್ವ ಸದಸ್ಯರ ಸಾಮಾನ್ಯ ವಾರ್ಷಿಕ ಸಭೆಯು ಗುರುವಾರ ಸಂಘದ ಕಛೇರಿಯಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಸಿ.ಅಮರೇಶ್ ಮಾತನಾಡಿ, ಸಂಘದ ಆಡಳಿತ ಮಂಡಳಿ ಹಾಗೂ ಹಾಲು ಉತ್ಪಾದಕರ ಸಹಕಾರದಿಂದ 2023-24ನೇ ಸಾಲಿನಲ್ಲಿ 3.79 ಲಕ್ಷ ಲಾಭಾಂಶ ಬಂದಿದ್ದು ಇದರಲ್ಲಿನ ನಿವ್ವಳ ಲಾಭವು 2.33 ಲಕ್ಷ ಬಂದಿದ್ದು ಈ ವರ್ಷವು ಹಾಲು ಉತ್ಪಾದಕಕರಿಗೆ ಶೇ 2.10% ಬೋನಸ್ ನೀಡಲಾಗುತ್ತದೆ ಎಂದರು,
ಸಹಕಾರ ಕ್ಷೇತ್ರದಲ್ಲಿ ಟೀಕೆಗಳು ಸಹಜವಾಗಿಯೇ ಇರುತ್ತವೆ ಟೀಕೆಗಳನ್ನು ಮೆಟ್ಟಿ ಪ್ರಮಾಣಿಕವಾಗಿ ಕೆಲಸ ಮಾಡುವ ಮೂಲಕ ಡೈರಿಯ ಮತ್ತಷ್ಟು ಅಭಿವೃದ್ಧಿಗೆ ಉತ್ಪಾದಕರು, ಆಡಳಿತ ಮಂಡಳಿಯ ಸದಸ್ಯರು, ಹಾಗೂ ಸಿಬ್ಬಂದಿ ಒಟ್ಟಾಗಿ ಕೆಲಸ ಮಾಡೋಣ ಡೈರಿಗೆ ಉತ್ಪಾದಕರೇ ಶಕ್ತಿಯಾಗಿದ್ದು ಗುಣಮಟ್ಟದ ಹಾಲು ಪೂರೈಕೆಯಿಂದ ಸಂಘದಿಂದ ಸಿಗುವ ವಿಶೇಷ ಸೌಲಭ್ಯಗಳನ್ನು ಪಡೆಯಬಹುದು ಎಂದರು.
ಈ ಸಂದರ್ಭದಲ್ಲಿ ಕೋಮುಲ್ ಉಪ ವ್ಯವಸ್ಥಾಪಕ ಡಾ.ಮಹೇಶ್ ಮಾತನಾಡಿ ಹಾಲಿನ ಡೇರಿಗಳು ಅಭಿವೃದ್ಧಿಯಾಗಬೇಕಾದರೆ, ಪಕ್ಷಾತೀತವಾಗಿ ಕೆಲಸ ಮಾಡಬೇಕು. ರೈತರು ಉತ್ತಮ ಕೊಬ್ಬಿನ ಅಂಶವಿರುವ ಹಾಲು ಸರಬರಾಜು ಮಾಡಿದಾಗ ಮಾತ್ರ ಡೇರಿ ಅಭಿವೃದ್ಧಿಯತ್ತ ಸಾಗಲು ಸಾಧ್ಯವಾಗುತ್ತದೆ ಹಸುಗಳ ಹೊಸ ಹೊಸ ರೋಗಗಳು ಬಂದ್ದು ಸಾಕಾಣಿಕೆ ಕಷ್ಟವಾಗಿದ್ದು ಹೆಚ್ಚಿನ ಕಾಳಜಿ ವಹಿಸಿ ಕಾಲಕಾಲಕ್ಕೆ ವಾಕ್ಸಿನ್ ಮಾಡಿಸಬೇಕು ಎಂದರು.
ಈ ಸಂದರ್ಭದಲ್ಲಿ ಕೋಲಾರ ಹಾಲು ಒಕ್ಕೂಟದ ವಿಸ್ತರಣಾಧಿಕಾರಿ ಎಸ್ ರಾಮಾಂಜಿನಪ್ಪ, ಆಡಳಿತ ಮಂಡಳಿ ನಿರ್ದೇಶಕರಾದ ಬಿ.ಶ್ರೀನಿವಾಸಪ್ಪ, ಸಿ ನಾಗರಾಜ್, ರಮೇಶ್, ಅಚ್ಚಪ್ಪ, ಸಿ.ಸಿ ಶ್ರೀನಿವಾಸ್, ಭಾಗ್ಯಲಕ್ಷ್ಮೀ, ಶಾರದದೇವಿ, ಸೊಣ್ಣಮ್ಮ ವೆಂಕಟಮ್ಮ ವಿಮಲಮ್ಮ, ಕಾರ್ಯದರ್ಶಿ ಆರ್ ಗೋಪಾಲಪ್ಪ, ಗ್ರಾಮಸ್ಥರಾದ ಸಿ.ಎಸ್ ಅಂಜನಗೌಡ, ವೆಂಕಟರಮಣಪ್ಪ, ಶಿವಕುಮಾರ್ ಸೇರಿದಂತೆ ಹಾಲು ಉತ್ಪಾದಕರು, ಗ್ರಾಮಸ್ಥರು ಇದ್ದರು,
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…