ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ: 13 ಮಂದಿ ಸಾವು: ಮೃತ ದುರ್ದೈವಿಗಳ ಕುಟುಂಬಗಳಿಗೆ ತಲಾ ರೂ. 2 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಚಿಕ್ಕಬಳ್ಳಾಪುರದ ಚಿತ್ರಾವತಿ ಸಮೀಪ ಇಂದು ಸಂಭವಿಸಿದ ಭೀಕರ ಅಪಘಾತದಲ್ಲಿ 13 ಮಂದಿ ಮೃತಪಟ್ಟ ಸುದ್ದಿ ತಿಳಿದು ಅತೀವ ನೋವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೃತ ದುರ್ದೈವಿಗಳ ಕುಟುಂಬಗಳಿಗೆ ತಲಾ ರೂ. 2 ಲಕ್ಷ ಪರಿಹಾರ ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಇಂದು ಬೆಳಗ್ಗಿನ ಜಾವ ಈ ಅನಾಹುತ ಸಂಭಿವಿಸಿದೆ. ಚಿಕ್ಕಬಳ್ಳಾಪುರ ನಗರ ಹೊರವಲಯದ ಚಿತ್ರಾವತಿ ಬಳಿಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ  ಟಾಟಾ ಸುಮೋ ವಾಹನ ನಿಂತಿದ್ದ  ಸಿಮೆಂಟ್ ಬಲ್ಕರ್​ಗೆ ಡಿಕ್ಕಿ ಹೊಡೆದಿದೆ.

ಬೆಳಗ್ಗೆ ದಟ್ಟ ಮಂಜು ಆವರಿಸಿದ್ದರಿಂದ ಈ ಅಪಘಾತ ನಡೆದಿದೆ ಎನ್ನಲಾಗುತ್ತಿದೆ.

Leave a Reply

Your email address will not be published. Required fields are marked *