ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮರಕ್ಕೆ ನೇಣು ಹಾಕಿಕೊಂಡು ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಕಾರು ಚಾಲಕ ಆತ್ಮಹತ್ಯೆ ಮಾಡಿಕೊಂಡಿಕೊಂಡಿರುವ ಘಟನೆ ನಡೆದಿದೆ.
ಬಾಬು.ಎಂ (33) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ…
ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, “ನನ್ನ ಸಾವಿಗೆ ಸಂಸದ ಡಾ.ಕೆ. ಸುಧಾಕರ್ ಕಾರಣ” ಎಂದು ಬರೆಯಲಾಗಿದೆ ಎನ್ನಲಾಗಿದೆ…
ಮೃತ ಬಾಬು ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಆತ್ಮಹತ್ಯೆಗೆ ಸಂಸದ ಡಾ.ಕೆ.ಸುಧಾಕರ್, ಅವರ ಬೆಂಬಲಿಗರಾದ ನಾಗೇಶ್ ಎನ್. ಮತ್ತು ಮಂಜುನಾಥ್ ಕಾರಣ ಎಂದು ಡೆತ್ ನೋಟ್ ಬರೆದಿದ್ದಾರೆ ಎಂದು ತಿಳಿದುಬಂದಿದೆ.
‘ಸುಧಾಕರ್ ಸಚಿವರಾಗಿದ್ದ ವೇಳೆ ಅವರ ಬೆಂಬಲಿಗರಾದ ನಾಗೇಶ್ ಮತ್ತು ಮಂಜುನಾಥ್ ಖಾಯಂ ಸರ್ಕಾರಿ ಕೆಲಸ ಕೊಡಿಸುತ್ತೇವೆ ಅದಕ್ಕೆ 40 ಲಕ್ಷ ನೀಡಬೇಕು ಎಂದಿದ್ದರು. ನಾನು ನನ್ನ ಬಳಿ ಇದ್ದ ಹಣದ ಜೊತೆಗೆ ಸಾಲ ಮಾಡಿ ರೂ.25 ಲಕ್ಷ ನೀಡಿದ್ದೆ. ಆದರೆ, ಕೆಲಸ ಮಾತ್ರ ಕೊಡಿಸಲಿಲ್ಲ’ ಎಂದು ಡೆತ್ ನೋಟ್‌ನಲ್ಲಿ ಬರೆದಿದ್ದಾರೆ ಎಂದು ತಿಳಿದುಬಂದಿದೆ…
ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…
ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…
ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…
ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…
ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…
ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…