ಒಂದು ಕಡೆ ಬರ, ಮತ್ತೊಂದೆಡೆ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ಧೋರಣೆ, ಇವೆರಡರಿಂದ ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಮಾಜಿ ಸಚಿವ ಡಾ.ಕೆ.ಸುಧಾಕರ್ ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ಧೋರಣೆಯನ್ನು ಖಂಡಿಸಿ ಇಂದು ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಘಟಕ ಹಾಗೂ ರೈತ ಪರ ಸಂಘಟನೆಗಳ ವತಿಯಿಂದ ಆಯೋಜಿಸಲಾಗಿದ್ದ ಬೃಹತ್ ರೈತರ ಪ್ರತಿಭಟನೆ ಅಂಗವಾಗಿ ನಗರದ ಒಕ್ಕಲಿಗರ ಕಲ್ಯಾಣ ಮಂಟಪದಿಂದ ಶಿಡ್ಲಘಟ್ಟ ವೃತ್ತದವರೆಗೆ ನಡೆದ ಮೆರವಣಿಗೆಯಲ್ಲಿ ಅವರು ಮಾತನಾಡಿದರು. ಅದರಲ್ಲೂ ನಮ್ಮ ಚಿಕ್ಕಬಳ್ಳಾಪುರ ಜಿಲ್ಲೆಯ ರೈತರ ಬಗ್ಗೆ ಕಾಂಗ್ರೆಸ್ ಸರ್ಕಾರ ಮಲತಾಯಿ ಧೋರಣೆ ತೋರುತ್ತಿದ್ದು, ಹಿಂದಿನ ಬಿಜೆಪಿ ಸರ್ಕಾರ ನೀಡಿದ್ದ ಯೋಜನೆಗಳನ್ನ ಕೂಡ ಕಸಿದುಕೊಳ್ಳುವ ಪಾಪದ ಕೆಲಸ ಮಾಡುತ್ತಿದೆ ಎಂದು ಗುಡುಗಿದರು.
ಅಧಿಕಾರಕ್ಕೆ ಬಂದ ಕೇವಲ ಐದು ತಿಂಗಳಿನಲ್ಲೇ ಕಾಂಗ್ರೆಸ್ ಸರ್ಕಾರ ನಮ್ಮ ನಾಡಿನ ರೈತರ ಪಾಲಿಗೆ ದೊಡ್ಡ ಶಾಪವಾಗಿದೆ. ಅನ್ನದಾತರ ಆಕ್ರೋಶ, ಆಕ್ರಂದನ, ಕಣ್ಣೀರು ಕಾಂಗ್ರೆಸ್ ಸರ್ಕಾರಕ್ಕೆ ಶಪವಾಗಿ ತಟ್ಟುವ ದಿನ ಬಹಳ ದೂರವಿಲ್ಲ ಎಂದು ತಿಳಿಸಿದರು.
ಈಗಲಾದರೂ ಕಾಂಗ್ರೆಸ್ ಸರ್ಕಾರ ಎಚ್ಚೆತ್ತುಕೊಂಡು ರೈತರ ಬಗ್ಗೆ ಗಮನ ಹರಿಸಲಿ, ಅನ್ನದಾತರ ಸಮಸ್ಯೆಗಳಿಗೆ ಸ್ಪಂದಿಸಲಿ ಎಂದು ಆಗ್ರಹಿಸಿದರು.
ಈ ವೇಳೆ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮಾಜಿ ಸಚಿವ ಆರ್.ಅಶೋಕ್, ಸಂಸದ ಎಸ್.ಮುನಿಸ್ವಾಮಿ ಸೇರಿದಂತೆ ಇತರರು ಭಾಗಿಯಾಗಿದ್ದರು.
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…