ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆಯ ಪ್ರಸಿದ್ಧ ಶ್ರೀ ಪ್ರಸನ್ನ ಲಕ್ಷ್ಮಿ ವೆಂಕಟರಮಣ ಸ್ವಾಮಿ ದೇವಾಲಯಕ್ಕೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಭೇಟಿ ನೀಡಿ ಸ್ವಾಮಿಯ ದರ್ಶನ ಪಡೆದರು.
ನಿನ್ನೆಯಷ್ಟೇ ಬಿಜೆಪಿ ಹೈಕಮಾಂಡ್ ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಡಾ.ಕೆ.ಸುಧಾಕರ್ ಅವರ ಹೆಸರು ಘೋಷಣೆ ಮಾಡಿತ್ತು. ಇಂದು ಬೆಳಿಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಸುಧಾಕರ್ ಅವರು, ಸಂಜೆ ತೂಬಗೆರೆಗೆ ಆಗಮಿಸಿ ದೇವರ ದರ್ಶನ ಪಡೆದರು.
ಇಂದು ತೂಬಗೆರೆ ಪ್ರಸನ್ನ ಲಕ್ಷ್ಮಿ ವೆಂಕಟರಮಣ ಸ್ವಾಮಿ ಬ್ರಹ್ಮರಥೋತ್ಸವ ಕೂಡ ನಡೆಯಿತು. ಡಾ.ಸುಧಾಕರ್ ಭೇಟಿ ವೇಳೆ ಮುಖಂಡರಾದ ಆರ್. ಪ್ರತಾಪ್, ಕೃಷ್ಣಪ್ಪ, ವಾಸುದೇವ್ ಸೇರಿದಂತೆ ಹಲವರು ಇದ್ದರು.