ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ: ಪಕ್ಷೇತರ ಅಭ್ಯರ್ಥಿಯಾಗಿ ಡಿ.ಸುಧಾಕರ್ ನಾಮಪತ್ರ ಸಲ್ಲಿಕೆ

ಲೋಕಸಭಾ ಚುನಾವಣೆ ಹಿನ್ನೆಲೆ ಈಗಾಗಲೇ ರಾಷ್ಟ್ರೀಯ ಹಾಗೂ ಪ್ರಾದೇಶಿಕ ಪಕ್ಷಗಳು ಆಯಾ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಆಯ್ಕೆ ಟಿಕೆಟ್ ನೀಡಿದೆ. ಟಿಕೆಟ್ ಪಡೆದಂತಹ ಅಭ್ಯರ್ಥಿಗಳು ಮುಖಂಡರು, ಕಾರ್ಯಕರ್ತರೊಂದಿಗೆ ರೋಡ್ ಶೋ ನಡೆಸಿ ನಾಮಪತ್ರಗಳನ್ನು ಸಲ್ಲಿಸುತ್ತಿದ್ದಾರೆ.

ಅದರಂತೆ ಪಕ್ಷೇತರ ಅಭ್ಯರ್ಥಿಗಳು ಸಹ ಚುನಾವಣಾ ಕಣಕ್ಕೆ ಧುಮುಕಿದ್ದಾರೆ. ನಾಮಪತ್ರಗಳನ್ನು ಸಹ ಚುನಾವಣಾಧಿಕಾರಿಗಳಿಗೆ ಸಲ್ಲಿಸುತ್ತಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ದೇವನಹಳ್ಳಿ ತಾಲೂಕಿನ ಕುರುಬರಕುಂಟೆ ಗ್ರಾಮದ ಡಿ.ಸುಧಾಕರ್ ಅವರು ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ.

ಈಗಾಗಲೇ ಬಿಜೆಪಿ‌ ಪಕ್ಷದಿಂದ ಡಾ.ಕೆ.ಸುಧಾಕರ್ ಅವರು ಲೋಕಸಭಾ ಕಣಕ್ಕೆ ಇಳಿದಿದ್ದಾರೆ. ಅಬ್ಬರದ ಪ್ರಚಾರ ಕಾರ್ಯವನ್ನು ಸಹ ಪ್ರಾರಂಭಿಸಿದ್ದಾರೆ. ಗುರುವಾರ ನಾಮಪತ್ರ ಸಲ್ಲಿಸಲಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ರಕ್ಷಾ ರಾಮಯ್ಯ ಚುನಾವಣಾ ಅಖಾಡಕ್ಕೆ ಇಳಿದು ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *