ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ಬಿಗ್ಬಾಸ್ ಮನೆಗೆ ಎಂಟ್ರಿ ಹಿನ್ನೆಲೆ, ಒಬ್ಬ ಎಂಎಲ್ ಎ ಬಿಗ್ ಬಾಸ್ ಮನೆಗೆ ಹೋಗುತ್ತಿರುವುದು ತಲೆತಗ್ಗಿಸುವ ವಿಚಾರ, ಇದೊಂದು ನಾಚಿಕೆಗೇಡಿನ ಸಂಗತಿ, ಇಡೀ ರಾಜ್ಯದಲ್ಲಿ ಎಂಎಲ್ ಎ ಬಿಗ್ ಬಾಸ್ ಗೆ ಎಂಟ್ರಿ ಕೊಟ್ಟಿಲ್ಲ ಎಂದು ಮಾಜಿ ಸಚಿವ ಡಾ.ಕೆ.ಸುಧಾಕರ್ ಲೇವಡಿ ಮಾಡಿದ್ದಾರೆ.
ಶಾಸಕರಾದವರು ಚಿಕ್ಕಬಳ್ಳಾಪುರದ ಮಾನ ಮರ್ಯಾದೆ ಕಳೆಯುತ್ತಿದ್ದಾರೆ. ದೇಶ ಮಟ್ಟದಲ್ಲಿ ಚಿಕ್ಕಬಳ್ಳಾಪುರ ಒಳ್ಳೆ ಹೆಸರು ಮಾಡಿತ್ತು, ಈಗ ಆ ಹೆಸರನ್ನ ಶಾಸಕ ಪ್ರದೀಪ್ ಈಶ್ವರ್ ಹಾಳು ಮಾಡುತ್ತಿದ್ದಾರೆ ಎಂದು ಎಂಎಲ್ ಎ ಪ್ರದೀಪ್ ಈಶ್ವರ್ ವಿರುದ್ಧ ಹರಿಹಾಯ್ದರು.