ಚಿಕ್ಕಮಧುರೆ ಶನಿಮಹಾತ್ಮಸ್ವಾಮಿ ಬ್ರಹ್ಮರಥೋತ್ಸವ‌ ಸಂಪನ್ನ

ಕನಸವಾಡಿ(ದೊಡ್ಡಬಳ್ಳಾಪುರ): ತಾಲೂಕಿನ ಮಧುರೆ ಹೋಬಳಿಯಲ್ಲಿನ ಕನಸವಾಡಿಯ ಇತಿಹಾಸ ಪ್ರಸಿದ್ಧ ಶನಿಮಹಾತ್ಮ ಸನ್ನಿಧಿಯಲ್ಲಿ ಬ್ರಹ್ಮರಥೋತ್ಸವ ಇಂದು ವಿಜೃಂಭಣೆಯಿಂದ ನೆರವೇರಿತು.

ಶನಿಮಹಾತ್ಮ ಸ್ವಾಮಿಯ ಉತ್ಸವ ಮೂರ್ತಿ ಹೊತ್ತ ರಥವನ್ನು ಜಯಘೋಷಣೆಗಳೊಂದಿಗೆ‌ ದೇವಾಲಯದ ಸುತ್ತ ಪ್ರದಕ್ಷಿಣೆ ಹಾಕಿಸಿ, ಸ್ವಸ್ಥಾನಕ್ಕೆ ತಂದು ನಿಲ್ಲಿಸಲಾಯಿತು. ಉತ್ಸವ ಮೂರ್ತಿ ಹೊತ್ತ ತೇರಿಗೆ ಭಕ್ತರು ಬಾಳೆಹಣ್ಣು ದವನ ಸಮರ್ಪಿಸಿ ಭಕ್ತಿ‌ ಮೆರೆದರು.

ಬ್ರಹ್ಮರಥೋತ್ಸವ ಹಿನ್ನೆಲೆ ದೇವರಿಗೆ ವಿಶೇಷ ಪೂಜೆ ಪುನಸ್ಕಾರ ನೆರವೇರಿಸಲಾಗಿತ್ತು. ವಿವಿಧ ಜಿಲ್ಲೆಗಳು, ಅಕ್ಕಪಕ್ಕದ ತಾಲೂಕುಗಳಿಂದ  ಭಕ್ತ ಸಾಗರ ಹರಿದುಬಂದು ದೇವರ ದರ್ಶನ ಪಡೆದರು.

ಡೊಳ್ಳು ಕುಣಿತ, ಕೀಲುಕುದುರೆ ಕುಣಿತ, ಕಂಸಾಳೆ ನೃತ್ಯ ಪ್ರದರ್ಶನಗಳು ನೋಡುಗರ ಕಣ್ಮನ ಸೆಳೆದವು. ಭಕ್ತ ಗಣಕ್ಕೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.

ಮಧುರೆ ಶನಿಮಹಾತ್ಮದೇವಾಲಯ ಧಾರ್ಮಿಕ ಕ್ಷೇತ್ರವಾಗಿ ಪ್ರಖ್ಯಾತಿ ಪಡೆದಿದೆ. 80 ವರ್ಷಗಳ ಹಿಂದೆ ಸ್ಥಾಪಿತವಾದ ದೇವಸ್ಥಾನ ದಿನೇದಿನೆ ಅಭಿವೃದ್ಧಿಗೊಂಡು ಈಗ ಸುಸಜ್ಜಿತ ದೇಗುಲ ಹೊಂದಿದೆ. ಸುಂದರವಾದ ರಾಜಗೋಪುರ, ಕಲ್ಲು ಮಂಟಪದ ಆವರಣವಿರುವ ಗರ್ಭಗುಡಿಯಲ್ಲಿ ಮೂಲ ವಿಗ್ರಹದೊಂದಿಗೆ ಶನಿಮಹಾತ್ಮ ಮೂರ್ತಿ ಪ್ರತಿಷ್ಠಾಪಿಸಲಾಗಿದೆ.

ದೇವಾಲಯ ಮುಂಭಾಗದ ಮಂಟಪದ ಉತ್ಸವ ಮೂರ್ತಿಗೆ ಪ್ರತಿದಿನ ವಿಶೇಷ ಪೂಜೆ ನೆರವೇರಿಸಲಾಗುತ್ತಿದೆ. ದೇಗುಲ ಆವರಣದಲ್ಲಿ ಗಣಪತಿ ದೇವಾಲಯವಿದೆ. ಇಲ್ಲಿ ಶನಿಮಹಾತ್ಮ ಹಾಗೂ ಜೇಷ್ಠಾದೇವಿ ದೇಗುಲಗಳು ಒಟ್ಟಾಗಿರುವುದು ತುಂಬ ಅಪರೂಪವಾಗಿದೆ.

Ramesh Babu

Journalist

Recent Posts

ಸೂಕ್ತ ಸಮಯದಲ್ಲಿ ಸಿಗದ ಚಿಕಿತ್ಸೆ: 9 ತಿಂಗಳ ತುಂಬು ಗರ್ಭಿಣಿ ಆಸ್ಪತ್ರೆಯಲ್ಲಿ ಸಾವು: ಮುಗಿಲು ಮುಟ್ಟಿದ ಕುಟುಂಬಸ್ಥರ‌ ಆಕ್ರಂದನ

ದೊಡ್ಡಬಳ್ಳಾಪುರ ತಾಯಿ-ಮಗು ಆಸ್ಪತ್ರೆಯಲ್ಲಿ ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದೆ 9 ತಿಂಗಳ ತುಂಬು ಗರ್ಭಿಣಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ಇಂದು…

4 hours ago

ಪ್ರಜ್ವಲ್ ರೇವಣ್ಣ….ಶಿಕ್ಷೆಯ ಪ್ರಮಾಣ ಆದರ್ಶವೇ ಅಥವಾ ಅತಿರೇಕವೇ……?

ಎರಡು ಮುಖಗಳ, ವಿವಿಧ ಆಯಾಮಗಳ ಒಂದು ವಿಮರ್ಶೆ. ಭಾರತದ ಸಂವಿಧಾನ ಪ್ರತಿಪಾದಿಸುವ ಆಶಯಗಳ ಹಿನ್ನೆಲೆಯಲ್ಲಿ....... ಭಾರತದ ಸಂವಿಧಾನ ಮತ್ತು ಅದರ…

5 hours ago

ಕಂದಾಯ ದಾಖಲೆಗಳ ಗಣಕೀಕರಣ: ಭೂ ದಾಖಲೆಗಳ ರಕ್ಷಣೆ: ನಕಲಿಗೆ ಬ್ರೇಕ್

ದೊಡ್ಡಬಳ್ಳಾಪುರ: ಕಂದಾಯ ಇಲಾಖೆಯು ಭೂ ಸುರಕ್ಷಾ ಮಹತ್ವಾಕಾಂಕ್ಷಿ ಯೋಜನೆಯಡಿಯಲ್ಲಿ ತಾಲ್ಲೂಕು ಕಚೇರಿ, ಎ.ಸಿ ಕಚೇರಿ ಮತ್ತು ಡಿ.ಸಿ ಕಚೇರಿಗಳಲ್ಲಿರುವ ಪ್ರಮುಖ…

6 hours ago

ತ್ಯಾಜ್ಯ ಸುರಿಯುವ ಕಾರ್ಖಾನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು- ಶಾಸಕ ಧೀರಜ್ ಮುನಿರಾಜು

ದೊಡ್ಡಬಳ್ಳಾಪುರದ ಹಲವು ಭಾಗಗಳಲ್ಲಿ ಕೆಲವು ಕಾರ್ಖಾನೆಗಳು ಕಲುಷಿತ ಕೆಮಿಕಲ್ ತ್ಯಾಜ್ಯ, ಇನ್ನಿತರ ತ್ಯಾಜ್ಯವನ್ನು ಕೆರೆಗಳಿಗೆ, ಅರಣ್ಯ ಪ್ರದೇಶದಲ್ಲಿ ಸುರಿಯುತ್ತಿದ್ದಾರೆ. ಇದರಿಂದ…

20 hours ago

ಮಾತೃ ಹೃದಯಿ ಕರ್ನಾಟಕ ಸರ್ಕಾರದಿಂದ “ಕೂಸಿನ ಮನೆ” ಯೋಜನೆ

ಕೂಸು ಇದ್ದ ಮನಿಗ ಬೀಸಣಿಕೆ ಯಾತಕ ? ಕೂಸು ಕಂದಯ್ಯ ಒಳ ಹೊರಗ ಆಡಿದರ ಬೀಸಣಿಕೆ ಗಾಳಿ ಸುಳಿದಾವ. ನಮ್ಮ…

22 hours ago

ದೊಡ್ಡಬಳ್ಳಾಪುರ ತಾಲೂಕಿನಿಂದ ಜಿಲ್ಲಾಸ್ಪತ್ರೆ ಕೈತಪ್ಪಲ್ಲ: ಕೈತಪ್ಪಲು ನಾನು ಬಿಡೋದಿಲ್ಲ- ತಾಲೂಕಿನಲ್ಲಿ ಜಿಲ್ಲಾಸ್ಪತ್ರೆ  ಕರ್ತವ್ಯ ನಿರ್ವಹಿಸುವಂತೆ ಮಾಡಿಯೇ ತೀರುತ್ತೇನೆ- ಶಾಸಕ ಧೀರಜ್ ಮುನಿರಾಜ್

ದೊಡ್ಡಬಳ್ಳಾಪುರ ತಾಲೂಕಿಗೆ ಮಂಜೂರಾಗಿದ್ದ ಜಿಲ್ಲಾಸ್ಪತ್ರೆಯನ್ನು ದೇವನಹಳ್ಳಿಗೆ ವರ್ಗಾವಣೆ ಮಾಡಲಾಗಿದೆ ಎಂಬ ಸುಳ್ಳು ಮಾಹಿತಿ ತಾಲೂಕಿನ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಇದಕ್ಕೆ…

1 day ago