ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು ಜಖಂಗೊಂಡಿದ್ದು, ಒಂದು ಟಾಟಾ ಏಸ್ ವಾಹನಕ್ಕೂ ಹಾನಿಯಾಗಿದೆ.
ನೆಲಮಂಗಲದಿಂದ ದೊಡ್ಡಬಳ್ಳಾಪುರದ ಕಡೆಗೆ ಚಾಕೊಲೇಟ್ ಸಾಗಿಸುತ್ತಿದ್ದ ಕ್ಯಾಂಟರ್, ಚಾಲಕನ ಅಜಾಗರೂಕತೆ ಹಾಗೂ ಅತಿವೇಗದಿಂದ ನಿಯಂತ್ರಣ ತಪ್ಪಿ ರಸ್ತೆಬದಿಯ ಅಂಗಡಿಗಳಿಗೆ ನುಗ್ಗಿದೆ. ಬಳಿಕ ಕ್ಯಾಂಟರ್ ಸ್ಥಳದಲ್ಲೇ ಪಲ್ಟಿಯಾಗಿದೆ.
ಅಪಘಾತದ ಪರಿಣಾಮವಾಗಿ ಮೂರು-ನಾಲ್ಕು ಅಂಗಡಿಗಳು, ವಿದ್ಯುತ್ ಲೈಟ್ ಕಂಬ ಹಾಗೂ ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಟಾಟಾ ಏಸ್ ವಾಹನ ಜಖಂಗೊಂಡಿವೆ. ಘಟನೆಯ ವೇಳೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂಬುದು ಸಮಾಧಾನದ ಸಂಗತಿಯಾಗಿದೆ.
ಮಾಹಿತಿ ತಿಳಿಯುತ್ತಿದ್ದಂತೆಯೇ ದೊಡ್ಡಬೆಳವಂಗಲ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…