ಕೋಲಾರ: ವಿಧಾನಸಭಾ ಕ್ಷೇತ್ರದ ಶಾಸಕ ಕೊತ್ತೂರು ಮಂಜುನಾಥ್ ಅವರು ಬೆಳಗಾವಿ ಜಿಲ್ಲೆಯ ರಾಯಭಾಗದಲ್ಲಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ ಜಾರಕಿಹೊಳಿ ಪರವಾಗಿ ಚುನಾವಣಾ ಪ್ರಚಾರ ನಡೆಸಿದರು.
ಕ್ಷೇತ್ರದಲ್ಲಿನ ಬುಡ್ಗ ಜಂಗಮ ಸಮುದಾಯದ ಸಭೆ ಕರೆದು ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ಲೋಕಸಭಾ ಚುನಾವಣೆಯಲ್ಲಿ ನಮ್ಮ ಜನಾಂಗದವರೆಲ್ಲಾ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತ ನೀಡಬೇಕು ನಮ್ಮ ಜನಾಂಗದ ಯಾವುದೇ ಸಮಸ್ಯೆಗಳಿದ್ದರೆ ಸರಕಾರ ಮತ್ತು ನಾನು ಶಾಸಕನಾಗಿದ್ದು ನಿಮಗೆ ಸ್ಪಂದಿಸುವುದಾಗಿ ತಿಳಿಸಿದರು.
ಈ ವೇಳೆ ಗ್ರಾಮಗಳಲ್ಲಿ ದೇವಸ್ಥಾನ, ಸಮುದಾಯ ಭವನ ಸೇರಿದಂತೆ ಮನೆ ನಿರ್ಮಾಣ ಮಾಡಿಕೊಡಬೇಕೆಂದು ಶಾಸಕರಲ್ಲಿ ಮನವಿ ಮಾಡಿದರು ಕ್ಷೇತ್ರದಲ್ಲಿ ಇರುವ ನಾಯಕರೊಂದಿಗೆ ಚರ್ಚಿಸಿ ನಿಮ್ಮ ಸಮಸ್ಯೆಗೆ ಸ್ಪಂದಿಸುವುದಾಗಿ ಭರವಸೆ ನೀಡಿದರು.
ಈ ವೇಳೆ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕರ್ನಾಟಕ ರಾಜ್ಯ ಅಲೆಮಾರಿ ಬುಡ್ಗ ಜಂಗಮ ಕ್ಷೇಮಾಭಿವೃದ್ದಿ ಸಂಘದ ಮುಖಂಡರಾದ ಪರುಶಾರಾಮ್, ರಾಜೀವ್, ಸಂಕಣ್ಣನವರ್, ಮಾರುತಿ, ರಮೇಶ್, ಪ್ರಕಾಶ್, ಎಣ್ಣೆ ಆನಂದ್, ರಾಮಪ್ಪ, ಬಹುರೂಪಿ, ಯಲ್ಲಪ್ಪ, ನಾಗಪ್ಪ, ವಿಭೂತಿ, ಬಸವರಾಜ್ ಸೇರಿದಂತೆ ಮತ್ತಿತರರು ಇದ್ದರು
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…
ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…
ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ಎಂದು ಮತ್ತೊಮ್ಮೆ ಸಾಬೀತು ಮಾಡೋಣ…