ಆನ್‌ಲೈನ್ ಬೆಟ್ಟಿಂಗ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ ವಿರುದ್ಧ ಜಾರಿ ನಿರ್ದೇಶನಾಲಯ ಮತ್ತೆ ದಾಳಿ ನಡೆಸಿ ಮುಂದುವರಿಸಿದೆ.
ಗುರುವಾರ ಚಳ್ಳಕೆರೆಯಲ್ಲಿ ವೀರೇಂದ್ರ ಪಪ್ಪಿಗೆ ಸೇರಿ ಎರಡು ಲಾಕರ್‌ಗಳನ್ನು ಜಪ್ತಿ ಮಾಡಿ 50.33 ಕೋಟಿ ರೂ. ಮೌಲ್ಯದ 40 ಕೆ.ಜಿ. ಚಿನ್ನದ ಗಟ್ಟಿಯನ್ನು ಜಪ್ತಿ ಮಾಡಲಾಗಿದೆ.
ಆರೋಪಿಯನ್ನು ಕಸ್ಟಡಿಗೆ ಪಡೆದಿರುವ ಅಧಿಕಾರಿಗಳು ಗುರುವಾರ ವಿವಿಧ ಕಡೆ ನಡೆಸಿದ ಶೋಧಕಾರ್ಯಾಚರಣೆ ವೇಳೆ ಚಳ್ಳಕೆರೆಯಲ್ಲಿರುವ ಬ್ಯಾಂಕಿನ ಎರಡು ಲಾಕರ್‌ನಲ್ಲಿ 40 ಕೆ.ಜಿ. ತೂಕದ 24 ಕ್ಯಾರೆಟ್ ಚಿನ್ನದ ಗಟ್ಟಿಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಸೆಪ್ಟೆಂಬರ್ 4 ರಂದು ಇಡಿ ಅಧಿಕಾರಿಗಳು ಬೆಂಗಳೂರು, ಚಿತ್ರದುರ್ಗ ಸೇರಿದಂತೆ ವಿವಿಧ ಕಡೆ ಶೋಧ ನಡೆಸಿದ ವೇಳೆ ವೀರೇಂದ್ರ ಅವರ ಹೆಸರಿನಲ್ಲಿರುವ 9 ಬ್ಯಾಂಕ್ ಖಾತೆಗಳಿಂದ 55 ಕೋಟಿ ರೂ. ಮೊತ್ತದ ಠೇವಣಿ ಪತ್ತೆಯಾಗಿತ್ತು. ಇದರ ಬೆನ್ನಲ್ಲೇ ಈಗ 40 ಕೆ.ಜಿ ಚಿನ್ನದ ಗಟ್ಟಿ ಪತ್ತೆಯಾಗಿದೆ.
ಇದಕ್ಕೂ ಮೊದಲು, ಇಡಿ ಅಂದಾಜು 21 ಕೆಜಿ ಚಿನ್ನದ ಗಟ್ಟಿ, ನಗದು, ಚಿನ್ನ ಮತ್ತು ಬೆಳ್ಳಿ ಆಭರಣಗಳು, ಹಲವು ಬ್ಯಾಂಕ್ ಖಾತೆಗಳು ಮತ್ತು ದುಬಾರಿ ವಾಹನ ಸೇರಿ 103 ಕೋಟಿ ರೂ. ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದೆ.
ಈ ಪ್ರಕರಣದಲ್ಲಿ ಇಲ್ಲಿಯವರೆಗೆ ಒಟ್ಟು ವಶಪಡಿಸಿಕೊಳ್ಳಲಾದ ಮೊತ್ತ 150 ಕೋಟಿ ರೂ.ದಾಟಿದೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…