ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ್ ಸೇರಿ ಹಲವು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಆರ್‌ಸಿಬಿ ವಿಜಯೋತ್ಸವ ಸಂದರ್ಭದಲ್ಲಿ ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ 11 ಮಂದಿ ಕಾಲ್ತುಳಿತ ಸಾವಿಗೆ ಕಾರಣ ಹಾಗೂ ಸಾವಿಗೆ ಯಾರು ಹೊಣೆ ಎಂಬುದನ್ನು ಪತ್ತೆ ಹಚ್ಚುವ ಸಲುವಾಗಿ ಮ್ಯಾಜಿಸ್ಟೀರಿಯಲ್ ತನಿಖೆ ಗುರುವಾರ ಆರಂಭವಾಗಿದೆ.
ಇದರ ಬೆನ್ನಲ್ಲೆ ಸಿಎಂ ಸಿದ್ದರಾಮಯ್ಯ ಬೆಂಗಳೂರು ನಗರಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಹಿರಿಯ ಅಧಿಕಾರಿಗಳನ್ನು ಅಮಾನತು ಮಾಡಿದ್ದಾರೆ.
ಅಮಾನತುಗೊಂಡವರು…
ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್
ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಪೊಲೀಸ್ ಇನ್ಸ್‌ಪೆಕ್ಟರ್
ಸ್ಟೇಷನ್ ಹೌಸ್ ಮಾಸ್ಟರ್
ಸ್ಟೇಷನ್ ಹೌಸ್ ಆಫೀಸರ್
ಎಸಿಪಿ
ಕೇಂದ್ರ ವಿಭಾಗದ ಡಿಸಿಪಿ
ಕ್ರಿಕೆಟ್ ಕ್ರೀಡಾಂಗಣದ ಉಸ್ತುವಾರಿ
ಹೆಚ್ಚುವರಿ ಪೊಲೀಸ್ ಆಯುಕ್ತರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ.