ಶನಿವಾರ ಸಂತೆ ವ್ಯಾಪ್ತಿಯ ಗೌಡಳ್ಳಿ ಗ್ರಾಮದಲ್ಲಿ ನಡೆದ ಚಿನ್ನಾಭರಣಗಳ ಕಳವು ಪ್ರಕರಣ ಸಂಬಂಧಿಸಿದಂತೆ ಶನಿವಾರಸಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿ ಶನಿವಾರ ಸಂತೆಯ ಚೆಸ್ಕಾಂ ನ ಲೈನ್ ಮ್ಯಾನ್ ಹೊಳೆನರಸೀಪುರ ಮೂಲದ ಸಂದೀಪ್ ಆರ್(27 ) ಎಂಬುವನಿಂದ 27 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕಳೆದ ಜುಲೈ 28ರಂದು ಗೌಡಳ್ಳಿ ಗ್ರಾಮದ ನಿವಾಸಿ ಅಣ್ಣಯ್ಯ ಮೇಲಿದ್ದ ಸಂದರ್ಭ ರಾತ್ರಿ 8:30 ಸಮಯದಲ್ಲಿ ಅಪರಿಚಿತ ವ್ಯಕ್ತಿ ಒಬ್ಬ ನುಗ್ಗಿ ಅಣ್ಣಯ್ಯ ಅವರು ಧರಿಸಿದ್ದ ಮಂಕಿ ಕ್ಯಾಪ್ ಅನ್ನು ಕಣ್ಮುಚ್ಚುವಂತೆ ಎಳೆದು ಕುತ್ತಿಗೆಯಲ್ಲಿದ್ದ 27 ಗ್ರಾಂ ಚಿನ್ನದ ಸರವನ್ನು ಕಸಿದುಕೊಂಡು ಪರಾರಿ ಆಗಿರುವ ಕುರಿತು ಶನಿವಾರ ಸಂತೆ ಠಾಣೆಯಲ್ಲಿ ದೂರು ನೀಡಿದ್ದರು.
ಪೊಲೀಸರು ದೂರು ದಾಖಲೆ ಮಾಡಿಕೊಂಡು ಸೋಮವಾರಪೇಟೆ ತಾಲೂಕು ಡಿ ವೈ ಎಸ್ ಪಿ ಗಂಗಾಧರಪ್ಪ ಅವರ ನೇತೃತ್ವದಲ್ಲಿ ವೃತ್ತ ನಿರೀಕ್ಷಕರಾದ ಪ್ರೀತಮ್ ಡಿ ಶ್ರೇಯಕ್ಕರ್ ಹಾಗೂ ಠಾಣಾಧಿಕಾರಿ ಗೋವಿಂದ್ ರಾಜು ಹಾಗೂ ಸಿಬ್ಬಂದಿ ತಂಡ ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಶೀಘ್ರದಲ್ಲಿ ಕಳ್ಳನನ್ನು ಬಂಧಿಸಿದ್ದನ್ನು ಶನಿವಾರ ಸಂತೆಯ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಫ್ರಾನ್ಸಿಸ್ ಡಿಸೋಜಾ ಶ್ಲಾಘಿಸಿ ಅಭಿನಂದಿಸಿದ್ದಾರೆ.
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…
ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…
ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ಎಂದು ಮತ್ತೊಮ್ಮೆ ಸಾಬೀತು ಮಾಡೋಣ…