ಚಿರತೆ ದಾಳಿಗೆ ಮತ್ತೊಂದು ಹಸು ಬಲಿ: ಚಿರತೆ ದಾಳಿಗೆ ಸುಮಾರು 30 ಸಾವಿರ ಬೆಲೆ ಬಾಳುವ ಹಸು ಸ್ಥಳದಲ್ಲೇ ಸಾವು: ತಾಲೂಕಿನ ಕೆಳಗಿನಜೂಗಾನಹಳ್ಳಿ ಗ್ರಾಮದಲ್ಲಿ ಘಟನೆ

ಚಿರತೆ ದಾಳಿಗೆ ಸುಮಾರು 30 ಸಾವಿರ ಬೆಲೆ ಬಾಳುವ ಹಸು ಬಲಿಯಾಗಿರುವ ಘಟನೆ ತಾಲೂಕಿನ ಕೆಳಗಿನಜೂಗಾನಹಳ್ಳಿ ಗ್ರಾಮದ ಹೊರವಲಯದ ಕಾಡಿನಲ್ಲಿ ನಡೆದಿದೆ.

ಕೆಳಗಿನಜೂಗಾನಹಳ್ಳಿ ಗ್ರಾಮದ ನಿವಾಸಿ ರೈತ‌‌ ಮಹಿಳೆ ಗೌರಮ್ಮ ಎಂದಿನಂತೆ ತಮ್ಮ ಹಸುಗಳನ್ನು ಮೇಯಿಸಲು ಕಾಡಿಗೆ ಹೋಗಿದ್ದಾರೆ. ಮೇ.30 (ನಿನ್ನೆ) ಮಧ್ಯಾಹ್ನ 2 ಗಂಟೆ‌ ಸಮಯದಲ್ಲಿ ಪ್ರತಿದಿನ ನೀರು ಕುಡಿಸುವ ಜಾಗದಲ್ಲಿ ಚಿರತೆ ಏಕಾಏಕಿ ಹಸುವಿನ ಮೇಲೆ ಎರಗಿ ಗಾಯಪಡಿಸಿದೆ. ಗಾಯಪಡಿಸುವುದನ್ನು ಕಂಡ ಗೌರಮ್ಮ ತಮ್ಮ ಹಸುವನ್ನು ಕಾಪಾಡಲು ಜೋರಾಗಿ ಕೂಗಿಕೊಂಡಾಗ ಅಲ್ಲಿಂದ ಓಡಿಹೋಗಿರುವ ಚಿರತೆ.

ಚಿರತೆ ಇಲ್ಲದ ಸಮಯದಲ್ಲಿ ಬಂದು ನೋಡಿದಾಗ ಹಸು ಸ್ಥಳದಲ್ಲೇ ಪ್ರಾಣ ಬಿಟ್ಟಿರುವುದನ್ನು ಕಂಡಿದ್ದಾರೆ. ಹೇಗೋ ಪ್ರಾಣ ಹೋಗಿದೆ ಎಂದು ಸ್ಥಳದಲ್ಲೇ ಮೃತ ಹಸುವನ್ನು ಬಿಟ್ಟು‌ ಮಿಕ್ಕುಳಿದ ಹಸುಗಳನ್ನು ಮನೆಗೆ ಹೊಡೆದುಕೊಂಡು ಬಂದಿರುವ ಗೌರಮ್ಮ.

ಇಂದು (ಮೇ.31) ಅದೇ ಸ್ಥಳಕ್ಕೆ ಹೋಗಿ ನೋಡಿದಾಗ ಹಸುವನ್ನು ಪೂರ್ತಿಯಾಗಿ ತಿಂದು ತೇಗಿರುವ ಚಿರತೆ. ಸಾವಿರಾರು ರೂ. ಮೌಲ್ಯದ ಹಸುವನ್ನು ಕಳೆದುಕೊಂಡ ರೈತ ಮಹಿಳೆ ಗೌರಮ್ಮ ಸಂಕಷ್ಟದಲ್ಲಿದ್ದಾರೆ. ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಇಂತಹದ್ದೇ ಘಟನೆ ಮೇ.29ರಂದು ತಾಲೂಕಿನ ತೂಬಗೆರೆ ಹೋಬಳಿಯ ಹಿರೇಮುದ್ದೇನಹಳ್ಳಿ ಗ್ರಾಮದಲ್ಲಿ ನಡೆದಿತ್ತು. ಈ ಘಟನೆ ಮಾಸುವ ಮೊದಲೇ ಮತ್ತೊಂದು ಘಟನೆ ಸಂಭವಿಸಿದೆ. ಪ್ರಾಣಿಗಳ ಮೇಲೆ ಚಿರತೆ ದಾಳಿ ಕಂಡು, ಕೇಳಿ ಭಯ ಭೀತರಾಗಿರುವ ಜನ.

ಚಿರತೆಯಿಂದ ಅದೃಷ್ಟವಶಾತ್ ಮನುಷ್ಯನಿಗೆ ಯಾವ ಹಾನಿಯಾಗಿಲ್ಲ. ಹಾನಿಯಾಗುವುದಕ್ಕೂ ಮುನ್ನ ಚಿರತೆಯನ್ನ ಸೆರೆಹಿಡಿದು ನೆಮ್ಮದಿ ಜೀವನ ನಡೆಸಲು ಅನುವುಮಾಡಿಕೊಡುವಂತೆ ಅರಣ್ಯ ಇಲಾಖೆಗೆ ಜನ ಮನವಿ ಮಾಡಿದ್ದಾರೆ.

ಸ್ಥಳಕ್ಕೆ ಅರಣ್ಯ ಇಲಾಖಾ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ramesh Babu

Journalist

Recent Posts

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

12 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

13 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

15 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

16 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

17 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

23 hours ago