ಚಿರತೆ ದಾಳಿಗೆ ಮೇಕೆ ಬಲಿಯಾಗಿರುವ ಘಟನೆ ತಾಲೂಕಿನ ಕಸಬಾ ಹೋಬಳಿಯ ಹೊನ್ನಾಘಟ್ಟ ಗ್ರಾಮದ ದ್ರಾಕ್ಷಿ ತೋಟದಲ್ಲಿ ಭಾನುವಾರ ಸಂಜೆ ನಡೆದಿದೆ.
ಜಗಣ್ಣ ಎಂಬುವರ ತೋಟದಲ್ಲಿ ಚಿರತೆಯು ಮೇಕೆ ಮೇಲೆ ದಾಳಿ ಮಾಡಿ ಕೊಂದು ಹಾಕಿದೆ. ಜಗಣ್ಣ ಅವರ ತೋಟವನ್ನು ಲೀಸ್‌ಗೆ ಪಡೆದು ದ್ರಾಕ್ಷಿ ಬೆಳೆ ಇಟ್ಟಿದ್ದ ಮಧು ಎಂಬುವವರು ಸಮೀಪದಲ್ಲೇ ಇದ್ದರು ಚಿರತೆಯನ್ನು ನೋಡಿ ಗಾಬರಿಗೊಂಡು ಗ್ರಾಮಕ್ಕೆ ಓಡಿ ಬಂದಿದ್ದು, ಆತನನ್ನು ಗಮನಿಸಿದ ಚಿರತೆಯೂ ಸಹ ಬೇರೆಡೆ ಓಡಿ ಹೋಗಿದೆ ಎಂದು ತಿಳಿದು ಬಂದಿದೆ.
ಚಿರತೆ ದಾಳಿಯಿಂದ ಗಾಬರಿಗೊಂಡಿರುವ ಗ್ರಾಮಸ್ಥರು ಆದಷ್ಟೂ ಬೇಗ ಚಿರತೆಯನ್ನು ಸೆರೆ ಹಿಡಿಯಬೇಕು ಎಂದು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.
ಹೊನ್ನಾಘಟ್ಟ ಗ್ರಾಮ ನಗರದಿಂದ ಸುಮಾರು ಐದು ಕಿಮೀ ದೂರದಲ್ಲಿದ್ದು ಚಿರತೆ ನಗರದ ಕಡೆಗೂ ದಾಳಿ ಮಾಡುವ ಸಾಧ್ಯತೆ ಇದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…
ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…
ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…
ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…
ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…
ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…