ಚಿರತೆ ದಾಳಿಗೆ ಮೇಕೆ ಬಲಿಯಾಗಿರುವ ಘಟನೆ ತಾಲೂಕಿನ ತೂಬಗೆರೆ ಹೋಬಳಿಯ ಗುಂಜೂರು ಸಮೀಪವಿರುವ ಮಾಕಳಿ ಬೆಟ್ಟದ ತಪ್ಪಲಿನಲ್ಲಿ ನಡೆದಿದೆ.
ನಾಗಪ್ಪ ಎಂಬ ರೈತನಿಗೆ ಸೇರಿದ ಮೇಕೆ ಚಿರತೆ ದಾಳಿಗೆ ಬಲಿಯಾಗಿದೆ. ಎಂದಿನಂತೆ ತನ್ನ ಮೇಕೆಗಳನ್ನು ಮೇಯಲು ಕಾಡಿಗೆ ಕರೆದೊಯ್ದಿದ್ದಾರೆ. ಇಂದು ದಿಢೀರನೆ ಚಿರತೆ ಪ್ರತ್ಯಕ್ಷಗೊಂಡು ಒಂದು ಮೇಕೆಯನ್ನು ಬಲಿಪಡೆದು ಪರಾರಿಯಾಗಿದೆ.
ಮೇಕೆ ಮೇಲೆ ದಾಳಿ ನಡೆಸುವ ದೃಶ್ಯವನ್ನು ರೈತ ನಾಗಪ್ಪ ಕಣ್ಣಾರೆ ಕಂಡು ಕೂಗಿಕೊಂಡಾಗ ಅರೆಬರೆ ತಿಂದು ಎಸ್ಕೇಪ್ ಆಗಿದೆ ಎಂದು ಹೇಳಲಾಗಿದೆ.
ಪ್ರತಿನಿತ್ಯ ಮಾಕಳಿ ಬೆಟ್ಟ ಟ್ರೆಕ್ಕಿಂಗ್ ಮಾಡಲು ನೂರಾರು ಜನರು ಬರುತ್ತಾರೆ. ಇದೀಗ ಚಿರತೆ ಹಾವಳಿ ಹೆಚ್ಚಾಗಿದ್ದು, ಒಬ್ಬೊಬ್ಬರೇ ಟ್ರೆಕ್ಕಿಂಗ್ ಹೋಗಲು ಭಯಭೀತರಾಗಿದ್ದಾರೆ.
ಕೂಡಲೇ ಚಿರತೆ ಜಾಡು ಹಿಡಿದು ಸೆರೆಹಿಡಿಯಬೇಕು ಎಂದು ಚಾರಣಿಗರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಅರಣ್ಯ ಇಲಾಖೆಯಲ್ಲಿ ಮನವಿ ಮಾಡಿದ್ದಾರೆ.
ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…
ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…
ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…
ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…
ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…