ಚಿರತೆ ದಾಳಿಗೆ ಹಸು ಬಲಿ: ಹಸು ಕಳೆದುಕೊಂಡ ರೈತ ಕಂಗಾಲು: ತಾಲೂಕಿನ ಭೂಮೇನಹಳ್ಳಿ ಬಳಿ ಘಟನೆ

ಕಾಡಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಚಿರತೆ ದಾಳಿ‌ ಮಾಡಿ ಬಲಿಪಡೆದುಕೊಂಡಿರುವ ಘಟನೆ ತಾಲೂಕಿನ ಭೂಮೇನಹಳ್ಳಿ ಬಳಿ ಇಂದು ನಡೆದಿದೆ.

ಎಂದಿನಂತೆ ರೈತ ಆನಂದ ಮೂರ್ತಿ ತನ್ನ ಹಸುಗಳನ್ನು ಮೇಯಿಸಲು ಕಾಡಿಗೆ ಬಿಟ್ಟಿರುತ್ತಾರೆ. ಯಾರೂ ಇಲ್ಲದ ಸಮಯದಲ್ಲಿ ಹೊಂಚು ಹಾಕಿ ಸುಮಾರು 50-60 ಸಾವಿರ ಬೆಲೆ ಬಾಳುವ ಹಸುವಿನ ಮೇಲೆ ಎರಗಿ ಬಲಿ ಪಡೆದ ಚಿರತೆ. ಆನಂದ ಮೂರ್ತಿಗೆ ಸೇರಿದ ಮೂರು ಹಸುಗಳನ್ನು ಚಿರತೆ ದಾಳಿ ಮಾಡಿ ಕೊಂದು ಹಾಕಿದೆ. ಇದರಿಂದ ರೈತ ಸಂಕಷ್ಟದಲ್ಲಿ ಜೀವನ ನಡೆಸುವ ಪರಿಸ್ಥಿತಿ ಏರ್ಪಟ್ಟಿದೆ. ಮೂರು ಹಸುಗಳನ್ನು ಕಳೆದುಕೊ‌ಂಡ ರೈತನಿಗೆ ಇದೂವರೆಗೂ ಯಾವ ಇಲಾಖೆಯಿಂದ ಪರಿಹಾರ ಸಿಕ್ಕಿಲ್ಲ.

ಪದೇ ಪದೇ ಚಿರತೆ ದಾಳಿಯಿಂದ ರೈತರು, ಗ್ರಾಮಸ್ಥರು ಕಂಗಾಲಾಗಿದ್ದಾರೆ. ಕೂಡಲೇ ಚಿರತೆಯನ್ನು ಸೆರೆ ಹಿಡಿದು ನೆಮ್ಮದಿ ಜೀವನ ನಡೆಸಲು ಅನುವುಮಾಡಿಕೊಡಬೇಕು ಎಂದು ಗ್ರಾಮಸ್ಥರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ.

Ramesh Babu

Journalist

Recent Posts

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

1 hour ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

8 hours ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

16 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

17 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

2 days ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

2 days ago