ಚುನಾವಣಾಧಿಕಾರಿ (ಶಿಕ್ಷಕಿ)ಗೆ ಹೃದಯಾಘಾತ: ಚಿಕಿತ್ಸೆ ಫಲಿಸದೆ ಸಾವು

ದೊಡ್ಡಬಳ್ಳಾಪುರ: ನಗರದ ರೋಜಿಪುರ ಸರ್ಕಾರಿ ಶಾಲೆಯ ಮತಗಟ್ಟೆಯ ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡಿದ್ದ ಶಿಕ್ಷಕಿ ಕವಿತಾ (35), ಅವರು ಅಸ್ವಸ್ಥಗೊಂಡು ಕುಸಿದು ಬಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ನಗರದ ರೋಜಿಪುರ ಸರ್ಕಾರಿ ಶಾಲೆಯ ಮತಗಟ್ಟೆ ಸಂಖ್ಯೆ 155ರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿಕ್ಷಕಿ ಕವಿತಾ ಅವರು, ಸಂಜೆ ಮತಗಟ್ಟೆಯಲ್ಲಿಯೇ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದರು.

ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ತಿಳಿಸಿದ್ದಾರೆ.

ಮೃತ ಶಿಕ್ಷಕಿ ಕವಿತಾ ನೆಲಮಂಗಲ ತಾಲ್ಲೂಕಿನ ಮಾರಗೊಂಡನಹಳ್ಳಿ ಗ್ರಾಮದವರು. ದೊಡ್ಡಬಳ್ಳಾಪುರ ತಾಲ್ಲೂಕಿನ ಭೂಚನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಸಂಜೆ ಚುನಾವಣೆ ಕಾರ್ಯ ಮುಗಿದ ನಂತರ ಹೃದಯಾಘಾತದಿಂದ ಕುಸಿದು ಬಿದ್ದು ಸಾವನಪ್ಪಿದ್ದಾರೆ.

ಮೃತರ ಅಗಲಿಕೆಗೆ ಪ್ರಾಥಮಿಕ ಶಾಲೆ ಶಿಕ್ಷಕರ ಸಂಘದ ಪದಾಧಿಕಾರಿಗಳು ಕಂಬನಿ‌ ಮಿಡಿದಿದ್ಧಾರೆ.

Ramesh Babu

Journalist

Recent Posts

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

6 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

10 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

13 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

16 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

1 day ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

1 day ago