ಸಾರ್ವತ್ರಿಕ ಲೋಕಸಭಾ ಚುನಾವಣೆ ಸಂಬಂಧ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಚುನಾವಣೆಯನ್ನು ಪಾರದರ್ಶಕವಾಗಿ ನಡೆಸುವ ಸಲುವಾಗಿ ಚುನಾವಣೆ ಅಕ್ರಮಗಳನ್ನು ತಡೆಯಲು ಹೆಚ್ಚಿನ ತಪಾಸಣೆ ನಡೆಸಿ ಎಂದು ರಾಜ್ಯ ವಿಶೇಷ ಚುನಾವಣೆ ವೆಚ್ಚ ವೀಕ್ಷಕರಾದ ಮುರಳಿ ಕುಮಾರ್ ಅವರು ಚುನಾವಣಾ ಅಧಿಕಾರಿಗಳಿಗೆ ಸೂಚಿಸಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ನ ಸರ್.ಎಂ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಚುನಾವಣೆ ವೆಚ್ಚ ವೀಕ್ಷಣೆ ಸಂಬಂಧ ಇಂದು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದ ಅವರು ಚುನಾವಣೆಯನ್ನು ಪಾರದರ್ಶಕವಾಗಿ ನಡೆಸುವ ದೃಷ್ಟಿಕೋನದಲ್ಲಿ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು. ಚೆಕ್ ಪೋಸ್ಟ್ ಗಳಲ್ಲಿ ಕಟ್ಟುನಿಟ್ಟಾಗಿ ತಪಾಸಣೆ ನಡೆಸಬೇಕು. ಅಕ್ರಮ ಮದ್ಯ, ನಗದು ಸಾಗಾಟದ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಿ 10 ಲಕ್ಷಕ್ಕೂ ಅಧಿಕ ಮೌಲ್ಯದ ನಗದು ಅಥವಾ ವಸ್ತುಗಳು ಪತ್ತೆಯಾದಲ್ಲಿ ತಕ್ಷಣವೇ ವೆಚ್ಚ ವೀಕ್ಷಕರಿಗೆ ಮಾಹಿತಿ ನೀಡಿ ವರದಿ ಸಲ್ಲಿಸಿ ಎಂದು ಹೇಳಿದರು.
ಕಳೆದ ಚುನಾವಣೆಯಲ್ಲಿ ಕಡಿಮೆ ಮತದಾನ ವಾದ ಕ್ಷೇತ್ರಗಳಲ್ಲಿ ಮತದಾನ ಕುರಿತು ವಿಶೇಷ ಜಾಗೃತಿ ಮೂಡಿಸಿ. ಅಬಕಾರಿ, ವಾಣಿಜ್ಯ ತೆರಿಗೆ, ಆದಾಯ ತೆರಿಗೆ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಸ್ವಯಂ ಪ್ರೇರಿತ ದಾಳಿ, ತಪಾಸಣೆ ನಡೆಸಿ. ಸೂಕ್ತ ಮಾರ್ಗದಲ್ಲಿ ಅಧಿಕಾರಿಗಳ ಸಹಕಾರ, ಸಮನ್ವಯತೆಯಿಂದ ಕೆಲಸ ಮಾಡಿ ಎಂದು ಚುನಾವಣಾಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವೆಚ್ಚ ವೀಕ್ಷಕರಾದ ದೆಬಾಶಿಶ್ ಮಜುಮ್ ದಾರ್, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ, ಸಹಾಯಕ ಚುನಾವಣಾಧಿಕಾರಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ, ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಾಶ್ ಜಿ.ಟಿ ನಿಟ್ಟಾಲಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಎನ್ ಅನುರಾಧ, ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ್ ಡಿ.ಎಲ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಕರ್ತವ್ಯಕ್ಕೆ ನಿಯೋಜನೆ ಆಗಿರುವ ಚುನಾವಣಾಧಿಕಾರಿಗಳು, ಸಿಬ್ಬಂದಿ, ಇತರರು ಉಪಸ್ಥಿತರಿದ್ದರು.
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…
ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…