ಚುನಾವಣಾ ಆಯೋಗ ಇತ್ತೀಚಿಗೆ ಬಿಜೆಪಿಯ ಅಂಗಸಂಸ್ಥೆಯಂತೆ ವರ್ತಿಸುತ್ತಿದೆ- ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕಿಡಿ

ಪಾರದರ್ಶಕ ಹಾಗೂ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕಾದ ಚುನಾವಣಾ ಆಯೋಗ ಇತ್ತೀಚಿಗೆ ಬಿಜೆಪಿಯ ಅಂಗಸಂಸ್ಥೆಯಂತೆ ವರ್ತಿಸುತ್ತಿದೆ. ಚುನಾವಣೆಯ ಹೊಸ್ತಿಲಿನಲ್ಲಿರುವ ಬಿಹಾರದಲ್ಲಿ ಆಯೋಗ ಮತದಾರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಆರಂಭಿಸಿದೆ. ಇದು ಬಿಹಾರದಲ್ಲಿ ದೊಡ್ಡ ಸಂಖ್ಯೆಯ ಮತದಾರರನ್ನು ಅವರ ಮತದಾನ ಹಕ್ಕಿನಿಂದ ಕಸಿಯುವ ಹುನ್ನಾರ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.

ಚುನಾವಣಾ ಆಯೋಗದ ಈ ನಿರ್ಧಾರ ಅನೇಕ ಅನುಮಾನಗಳಿಗೆ ಕಾರಣವಾಗಿದೆ‌. ಮಹಾರಾಷ್ಟ್ರ ಚುನಾವಣೆಯಲ್ಲೂ ಆಯೋಗ ಇದೇ ರೀತಿಯಲ್ಲಿ ಅನುಮಾನಾಸ್ಪದ ನಿರ್ಧಾರ ಕೈಗೊಂಡಿತ್ತು. ಕೆಲವೇ ತಿಂಗಳುಗಳ ಅಂತರದಲ್ಲಿ ನಡೆದ ಲೋಕಸಭಾ ಹಾಗೂ ವಿಧಾನಸಭಾ ಚುನಾವಣೆಯ ನಡುವೆ 41 ಲಕ್ಷ ಮತದಾರರು ಇದ್ದಕ್ಕಿದ್ದಂತೆ ಸೇರ್ಪಡೆಯಾಗಿದ್ದರು ಎಂದರು.

ಮಹಾರಾಷ್ಟ್ರದಲ್ಲಿ ಮತದಾರರ ಸಂಖ್ಯೆಯನ್ನು ಭಾರಿ ಸಂಖ್ಯೆಯಲ್ಲಿ ಏರಿಸಿದ್ದ ಚು.ಆಯೋಗ, ಈಗ ಬಿಹಾರದಲ್ಲಿ ಪರಿಷ್ಕರಣೆಯ ನೆಪದಲ್ಲಿ ದೊಡ್ಡ ಸಂಖ್ಯೆಯ ಮತದಾರರ ಹಕ್ಕು ಕಸಿಯಲು ಹೊರಟಿದೆ‌. ಆಯೋಗದ ಇಂತಹ ಎಡವಟ್ಟು ನಿರ್ಧಾರಗಳು ಯಾರಿಗೆ ಅನುಕೂಲ ಮಾಡಲು ಎಂದು ಬಿಡಿಸಿ ಹೇಳಬೇಕಿಲ್ಲ ಎಂದು ಹೇಳಿದ್ದಾರೆ.

ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಬೇಕಿರುವುದು ಆಯೋಗದ ಜವಾಬ್ಧಾರಿ. ಆದರೆ ಆಯೋಗವೇ ಒಂದು ಪಕ್ಷದ ಅಂಗಸಂಸ್ಥೆಯಂತೆ ಅನ್ಯಾಯದ ಹಾದಿ ತುಳಿದರೆ ಬೇಲಿಯೇ ಎದ್ದು ಹೊಲ ಮೇಯ್ದಂತೆ. ಇನ್ನಾದರೂ ಚು.ಆಯೋಗ ವಿಶ್ವಾಸಾರ್ಹತೆ ಕಾಪಾಡಿಕೊಳ್ಳಲಿ ಎಂದು ಮನವಿ ಮಾಡಿದ್ದಾರೆ.

Ramesh Babu

Journalist

Recent Posts

ಎಸ್ ಐ ಆರ್…..

ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…

10 minutes ago

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

12 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

16 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

19 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

21 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

1 day ago