ಚುನಾವಣಾ ದಿನವೇ ಚುನಾವಣಾ ಬಹಿಷ್ಕಾರ: ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ಸ್ಮಶಾನಕ್ಕೆ ಜಮೀನು ಮಂಜೂರು ಮಾಡಿಕೊಡಬೇಕು, ಗ್ರಾಮದಲ್ಲಿ ಸಮುದಾಯ ಭವನ ನಿರ್ಮಾಣ ಮಾಡಬೇಕು, ಕಂದಾಯ ಇಲಾಖೆ ರೈತರಿಗೆ ಸಾಗುವಳಿ ಚೀಟಿ ನೀಡಬೇಕು. ಗ್ರಾಮದಲ್ಲಿ ಇನ್ನೂ ಹತ್ತು ಹಲವಾರು ಅಭಿವೃದ್ಧಿ ಕಾಮಗಾರಿಗಳು ನಡೆಸುವ ಭರವಸೆ ನೀಡುವವರೆಗೂ ಮತದಾನ ಮಾಡುವುದಿಲ್ಲ ಎಂದು ಚುನಾವಣಾ ದಿನವೇ ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದಲ್ಲಿ ಒಟ್ಟು 380 ಮತಗಳಿವೆ. ಬೆಳಗ್ಗೆಯಿಂದಲೂ ಮತಗಟ್ಟೆಗೆ ತೆರಳದೆ ಗ್ರಾಮಸ್ಥರೆಲ್ಲರೂ ಸೇರಿ ಬೀದಿಯಲ್ಲೇ ಕುಳಿತು ಪ್ರತಿಭಟನೆ‌ ನಡೆಸುತ್ತಿದ್ದಾರೆ.

ಗ್ರಾಮಸ್ಥರ ಮನವೊಲಿಕೆಗೆ ಪೊಲೀಸ್ ಅಧಿಕಾರಿಗಳು ಮುಂದಾದರೂ ಪ್ರಯೋಜನವಾಗಲಿಲ್ಲ. ಸ್ಥಳಕ್ಕೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬರುವಂತೆ ಒತ್ತಾಯ ಮಾಡಿದ್ದಾರೆ.

ಸಮಸ್ಯೆ ಬಗೆಹರಿಯದೆ ಮತದಾನ ಮಾಡಲ್ಲ ಎಂದು ಗ್ರಾಮಸ್ಥರು ಪಟ್ಟುಹಿಡಿದಿದ್ದಾರೆ.

Leave a Reply

Your email address will not be published. Required fields are marked *