ಚುನಾವಣಾ ನೀತಿ ಸಂಹಿತೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು: ಜಿ.ಪಂ ಸಿಇಒ ಡಾ.ಕೆ.ಎನ್.ಅನುರಾಧಾ

ಚುನಾವಣೆ ಪ್ರಯುಕ್ತ ನೇಮಕಾತಿಯಾಗಿರುವ ಎಲ್ಲಾ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿ ಚುನಾವಣಾ ನೀತಿ ಸಂಹಿತೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಜಿಲ್ಲೆಯಲ್ಲಿ ಚುನಾವಣಾ ಕಾರ್ಯ ಯಶಸ್ವಿಯಾಗಲು ಸಂಪೂರ್ಣವಾಗಿ ತೊಡಗಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಎಮ್‌.ಸಿ.ಸಿ ಅಧ್ಯಕ್ಷರಾದ ಡಾ.ಕೆ.ಎನ್. ಅನುರಾಧ ತಿಳಿಸಿದರು.

ದೊಡ್ಡಬಳ್ಳಾಪುರ ತಾಲೂಕಿನ ಎಸ್ .ಎಸ್. ಟಿ, ಎಫ್ ಎಸ್ ಟಿ, ವಿ ಎಸ್ ಟಿ ಹಾಗೂ ಸೆಕ್ಟರ್ ಅಧಿಕಾರಿಗಳೊಂದಿಗೆ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ತಂಡದ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿಯನ್ನು ಪಡೆದರು. ಚುನಾವಣೆಗೆ ಸಂಬಂಧಿಸಿದಂತೆ ದಾಖಲಾಗುವ ದೂರುಗಳನ್ನು ನಿಗದಿತ ಅವಧಿಯೊಳಗೆ ಇತ್ಯರ್ಥ ಪಡಿಸಬೇಕು. ಜನರು ಸ್ವಯಂ ಪ್ರೇರಿತವಾಗಿ ಬಂದು ಮತ ಚಲಾಯಿಸಲು ಎಲ್ಲಾ ಮತಗಟ್ಟೆಗಳಲ್ಲಿ ಕನಿಷ್ಠ ಸೌಲಭ್ಯಗಳನ್ನು ಕಲ್ಪಿಸಬೇಕು. ತಾಪಮಾನ ಹೆಚ್ಚಾಗಿರುವುದರಿಂದ ಮತಗಟ್ಟೆಗಳಲ್ಲಿ ಮತದಾರರಿಗೆ ನೆರಳಿನ ವ್ಯವಸ್ಥೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಹಾಯಕ ಚುನಾವಣಾ ಅಧಿಕಾರಿಗಳಾದ ಶ್ರೀನಿವಾಸ್ ಮಾತನಾಡಿ ತಾಲೂಕಿನಲ್ಲಿ ಚುನಾವಣೆಗೆ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಮತದಾರರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಿ ಪ್ರತಿಶತ ಮತದಾನದ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ಮುನಿರಾಜುರವರು ಸ್ವೀಪ್ ಅಡಿಯಲ್ಲಿ ಯುವಕರು, ಮಹಿಳೆಯರು ಹಾಗೂ ಕಾರ್ಮಿಕರು ತಪ್ಪದೇ ಮತ ಚಲಾಯಿಸುವಂತೆ ಮಾಡಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಪ್ರತಿ ಮತಗಟ್ಟೆಯಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಎಲ್ಲರೂ ಮತ ಚಲಾಯಿಸುವಂತೆ ಪ್ರೇರೇಪಣೆ ನೀಡಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ತಹಶೀಲ್ದಾರ್ ವಿದ್ಯಾ ವಿಭಾ ರಾಥೋಡ್, ಪೌರಾಯುಕ್ತರಾದ ಪರಮೇಶ್, ಸಹಾಯಕ ನಿರ್ದೇಶಕರಾದ ಕುಮಾರ್ ಸೇರಿದಂತೆ ಅಧಿಕಾರಿಗಳು ಇದ್ದರು..

Ramesh Babu

Journalist

Recent Posts

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

5 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

9 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

12 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

15 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

1 day ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

1 day ago