ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇರೆಗೆ ತೆಲಂಗಾಣದ ಡಿಜಿ ಮತ್ತು ಐಜಿಪಿ ಅಂಜನಿ ಕುಮಾರ್ ಅವರನ್ನು ಅಮಾನತುಗೊಳಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ ಎಂದು ANI ವರದಿ ಮಾಡಿದೆ.
ಪೂರ್ಣ ಪ್ರಮಾಣದ ಚುನಾವಣಾ ಫಲಿತಾಂಶ ಬರುವ ಮುನ್ನವೇ ಡಿಜಿಪಿ ಅಂಜನಿ ಕುಮಾರ್ ಮತ್ತು ಇತರ ಪೊಲೀಸ್ ಅಧಿಕಾರಿಗಳು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಅವರನ್ನು ಹೈದರಾಬಾದ್‌ನಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾಗಿ ಶುಭಾಶಯ ಕೋರಿದ್ದರು. ಈ ಹಿನ್ನೆಲೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇರೆಗೆ ಅಮಾನತುಗೊಳಿಸಲಾಗಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.