ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಸುವಂತಿಲ್ಲ: ಜಿಲ್ಲಾಧಿಕಾರಿ ಆರ್.ಲತಾ

2023ರ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ತಮ್ಮ ಚುನಾವಣಾ ಪ್ರಚಾರ ಕಾರ್ಯದಲ್ಲಿ ಯಾವುದೇ ರೀತಿಯಲ್ಲೂ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು ತಿಳಿಸಿದ್ದಾರೆ.

ರಾಜಕೀಯ ಪಕ್ಷಗಳು ಸಮುದಾಯವನ್ನು ತಲುಪಲು ಮೆರವಣಿಗೆ, ಸಾರ್ವಜನಿಕ ಭಾಷಣ, ಮನೆಭೇಟಿ, ಪಕ್ಷದ ಚಿಹ್ನೆಯಿರುವ ಬುಕ್ ಮತ್ತು ಬಟ್ಟೆಗಳನ್ನು ಹಂಚುವುದು ಹೀಗೆ ಹಲವಾರು ರೀತಿಯ ಚಟುವಟಿಕೆಗಳನ್ನು ಹಮ್ಮಿಕೊಳ್ಳುವಾಗ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಲಾಗಿದೆ.

ಮಕ್ಕಳನ್ನು ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳುವುದು ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗುತ್ತದೆ. ವಿಶ್ವಸಂಸ್ಥೆಯ ಮಕ್ಕಳ ಹಕ್ಕುಗಳ ಒಡಂಬಡಿಕೆಯ ಪರಿಚ್ಛೇದ 19ರನ್ವಯ ಮಕ್ಕಳನ್ನು ಯಾವುದೇ ರೀತಿಯಲ್ಲಿ ದುರುಪಯೋಗ ಮಾಡಿಕೊಳ್ಳದ ಹಾಗೇ ಸೂಕ್ತ ಕ್ರಮ ವಹಿಸುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು ನಿರ್ದೇಶಿಸಿದ್ದಾರೆ.

Ramesh Babu

Journalist

Recent Posts

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

5 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

6 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

9 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

9 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

11 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

16 hours ago